ಪಣಜಿ : ಟ್ರಕ್ ವೊಂದು ಕಣಿವೆಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾ ಜಿಲ್ಲೆಯ ಕ್ವಿಪೆಮ್ ಪಟ್ಟಣದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಟ್ರಕ್ ತಿರುಗಿ ಕಂದಕಕ್ಕೆ ಬಿದ್ದಿತ್ತು.
ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಮಕ್ಕಳು ಸೇರಿದಂತೆ 13 ಮಂದಿ ಪುರುಷರು ಮತ್ತು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮರಳುತ್ತಿದ್ದ ಗೋವಾ ಮುಖ್ಯಮಂತ್ರಿ ಸಾವಂತ್ ಮತ್ತು ಸಚಿವ ಫಲ್ ದೇಸಾಯಿ ಅವರು ಸ್ಥಳಕ್ಕೆ ಧಾವಿಸಿ ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಮತ್ತು ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡು ಗಾಯಾಳುಗಳಿಗೆ ನೆರವಾದರು.
ಇನ್ನು ಗಾಯಾಳುಗಳನ್ನು ಟ್ರಕ್ ನಿಂದ ಹೊರತೆಗೆದು ಅಂಬ್ಯುಲೆನ್ಸ್ ಮತ್ತು ಪೊಲೀಸ್ ವಾಹನಗಳಲ್ಲಿ ಪಣಜಿ ಬಳಿಯ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು.
Post Views: 174