ತುಮಕೂರು : ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿಯಾದ ಎಂ.ಆರ್. ಮಮತಾ(47) ಅವರು ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಮತಾ ಅವರು ಬ್ರೈನ್ ಟ್ಯೂಮಾರ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಕಳೆದ ಕೆಲ ದಿನಗಳಿಂದ ರಜೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಪತಿ ಹಿರಿಯ ಪತ್ರಕರ್ತ ಎಚ್.ಆರ್. ರವೀಶ್, ಪುತ್ರ ಪ್ರಜ್ವಲ್ ಹಾಗೂ ಅಪಾರ ಬಂಧು-ಬಾಂಧವರನ್ನು ಮಮತಾ ಅವರು ಅಗಲಿದ್ದಾರೆ. ಬೆಂಗಳೂರಿನ ಅವರ ಮನೆಯಲ್ಲಿ ಇಂದು ಬೆಳಗ್ಗೆ 8 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಹಾಲನೂರು ಗ್ರಾಮದ ಅವರ ತೋಟದಲ್ಲಿ ಇಂದು (ಶನಿವಾರ) ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕಳೆದ 19 ವರ್ಷಗಳಿಂದ ವಾರ್ತಾ ಇಲಾಖೆಯಲ್ಲಿ ಮಮತಾ ತಮ್ಮ ಸುಧಿರ್ಘ ಸೇವೆ ಸಲ್ಲಿಸಿದ್ದಾರೆ. ತುಮಕೂರಿನಲ್ಲಿ ಸಹಾಯಕ ಹಿರಿಯ ನಿರ್ದೇಶಕಿಯಾಗಿ 2 ವರ್ಷದಿಂದ ಕೆಲಸ ಮಾಡುತ್ತಿದ್ದರು. ವಾರ್ತಾಧಿಕಾರಿ ಮಮತಾ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಇದನ್ನೂ ಓದಿ : ದೀಪಿಕಾ ಪಡುಕೋಣೆಗೆ ಗಂಡು ಮಗು ಜನನ – ತಾಯಿ ಮಗುವಿನ ಫೋಟೋ ವೈರಲ್..!