Download Our App

Follow us

Home » Uncategorized » ತುಮಕೂರು : ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ – ಪ್ರಯಾಣಿಕರು ಪಾರು..!

ತುಮಕೂರು : ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ – ಪ್ರಯಾಣಿಕರು ಪಾರು..!

ತುಮಕೂರು : ಸಂಚರಿಸುತ್ತಿದ್ದಾಗ ದಿಢೀರ್ ಬೆಂಕಿ ಕಾಣಿಸಿಕೊಂಡು ಕಾರು ಧಗಧಗನೆ ಹೊತ್ತಿ ಉರಿದ ಘಟನೆ ಗುಬ್ಬಿ ತಾಲೂಕಿನ ಹೊಸಪಾಳ್ಯ ಗೇಟ್​ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಗುಬ್ಬಿಯಿಂದ ತುಮಕೂರು ಕಡೆಗೆ ಹೊರಟಿದ್ದ ಹೋಂಡಾ ಐಕಾನ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಅದೃಷ್ಟವಶಾತ್​ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಡಿಸೆಂಬರ್​ ತಿಂಗಳಲ್ಲಿ ಮಾರುತಿ ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನವಾದ ಘಟನೆ ನೆಲಮಂಗಲದ ಟೋಲ್ ಬಳಿ ಇರುವ ಪಾರ್ಲೆ ಜಿ ಬಿಸ್ಕೆಟ್ ಫ್ಯಾಕ್ಟರಿ ಬಳಿ ನಡೆದಿತ್ತು.

ಇಂಥ ಘಟನೆಗಳಿಗೆ ಎಂಜಿನ್‌ ದೋಷ ಕಾರಣವೇ ಎಂಬುದು ಖಚಿತವಾಗಿಲ್ಲ. ಈ ಹಿಂದೆ ಎಲೆಕ್ಟ್ರಿಕ್‌ ಕಾರುಗಳಲ್ಲಿ ಈ ರೀತಿಯ ದೋಷಗಳು ಕಂಡುಬಂದು ಬೆಂಕಿ ಹೊತ್ತಿಕೊಂಡಿದ್ದ ಘಟನೆಗಳು ನಡೆದಿದ್ದವು.

ಇದನ್ನೂ ಓದಿ : ಶಿರಾಡಿಘಾಟ್​​ನಲ್ಲಿ ಲಾರಿ-ಟ್ರಕ್ ನಡುವೆ ಅಪಘಾತ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here