Download Our App

Follow us

Home » ಜಿಲ್ಲೆ » ತುಮಕೂರು : ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ಬೆಂಕಿ ಅವಘಡ..!

ತುಮಕೂರು : ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ಬೆಂಕಿ ಅವಘಡ..!

ತುಮಕೂರು : ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಗರದಲ್ಲಿ ನಿನ್ನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿ‌ನಿಯರೆಲ್ಲ ಹೊರಗೆ ಓಡಿ ಬಂದಿದ್ದಾರೆ. ಅದೃಷ್ಟವಷಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಅಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ‌ ನಂದಿಸಿದ್ದಾರೆ. ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್‌ನಲ್ಲಿ 300 ವಿದ್ಯಾರ್ಥಿನಿಯರು ಇದ್ದರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್ ಹಾಗೂ ವಿದ್ಯಾರ್ಥಿನಿಯರ ಜೊತೆ ಡಿಸಿ ಶುಭಕಲ್ಯಾಣ್ ಅವರು ಮಾತುಕತೆ ನಡೆಸಿ, ಘಟನೆ ಬಗ್ಗೆ ಮಾಹಿತಿಯನ್ನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ಇಂದು ದೆಹಲಿಯಲ್ಲಿ ಕಾಂಗ್ರೆಸ್​ನ ಕಾರ್ಯಕಾರಿ ಸಮಿತಿ ಸಭೆ..!

 

 

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here