Download Our App

Follow us

Home » ಜಿಲ್ಲೆ » ತುಮಕೂರು : ಕೆಲವು ತಿಂಗಳಿನಿಂದ‌ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!

ತುಮಕೂರು : ಕೆಲವು ತಿಂಗಳಿನಿಂದ‌ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!

ತುಮಕೂರು : ಕೆಲವು ತಿಂಗಳಿನಿಂದ‌ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು 1.5 ವರ್ಷದ ಗಂಡು‌ ಚಿರತೆ ಬಿದ್ದಿದೆ.

ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಚಿರತೆ ಸೆರೆಗಾಗಿ ಬೋನ್​ ಇಡಲಾಗಿತ್ತು. ಕಳೆದ ಎರಡ್ಮೂರು ತಿಂಗಳಿನಿಂದ ಹೊನ್ನುಡಿಕೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆ,  ಗ್ರಾಮಸ್ಥರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು.

ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದರು. ಸದ್ಯ ಡಿಎಫ್ಒ ಅನುಪಮಾ ನೇತೃತ್ವದಲ್ಲಿ, ಎಸಿಎಫ್ ಮಹೇಶ್ ಮಾಲಗತಿ, ಆರ್​ಎಫ್​ಒ ನಿಮತಾ, ಡಿಆರ್​ಎಫ್​ ರಬ್ಬನಿ ತಂಡದಿಂದ ಚಿರತೆ ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ : ಗೋಕರ್ಣಕ್ಕೆ ಟ್ರಿಪ್ ಹೊರಟ್ಟಿದ್ದ ವಿದ್ಯಾರ್ಥಿಗಳ ಕಾರು ಪಲ್ಟಿ – ನಾಲ್ವರಿಗೆ ಗಂಭೀರ ಗಾಯ..! 

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here