ತುಮಕೂರು : ಕೆಲವು ತಿಂಗಳಿನಿಂದ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು 1.5 ವರ್ಷದ ಗಂಡು ಚಿರತೆ ಬಿದ್ದಿದೆ.
ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಚಿರತೆ ಸೆರೆಗಾಗಿ ಬೋನ್ ಇಡಲಾಗಿತ್ತು. ಕಳೆದ ಎರಡ್ಮೂರು ತಿಂಗಳಿನಿಂದ ಹೊನ್ನುಡಿಕೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆ, ಗ್ರಾಮಸ್ಥರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು.
ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದರು. ಸದ್ಯ ಡಿಎಫ್ಒ ಅನುಪಮಾ ನೇತೃತ್ವದಲ್ಲಿ, ಎಸಿಎಫ್ ಮಹೇಶ್ ಮಾಲಗತಿ, ಆರ್ಎಫ್ಒ ನಿಮತಾ, ಡಿಆರ್ಎಫ್ ರಬ್ಬನಿ ತಂಡದಿಂದ ಚಿರತೆ ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ : ಗೋಕರ್ಣಕ್ಕೆ ಟ್ರಿಪ್ ಹೊರಟ್ಟಿದ್ದ ವಿದ್ಯಾರ್ಥಿಗಳ ಕಾರು ಪಲ್ಟಿ – ನಾಲ್ವರಿಗೆ ಗಂಭೀರ ಗಾಯ..!
Post Views: 44