ತುಮಕೂರು : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ಮಾಡಲು ಕರೆದೊಯ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ದಿಬ್ಬೂರು ಬಳಿ ನಿನ್ನೆ ನಡೆದಿದೆ.
ಪ್ರಕರಣವೊಂದರ ಸ್ಥಳ ಮಹಜರು ಮಾಡಲು ರೌಡಿಶೀಟರ್ ಮನು ಎಂಬಾತನನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಮನು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣವೇ ಎಚ್ಚೆತ್ತ ತುಮಕೂರು ನಗರ ಪೊಲೀಸ್ ಠಾಣೆ ಸಿಪಿಐ ದಿನೇಶ್ ಅವರು ರೌಡಿಶೀಟರ್ ಮನು ಕಾಲಿಗೆ ಗುಂಡು ಹಾರಿಸಿದ್ದಾರೆ. ಮನು ಬಲಗಾಲಿಗೆ ಗುಂಡೇಟು ತಗುಲಿದ್ದು, ಸದ್ಯ ಆತನಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮನು ಕುಖ್ಯಾತ ರೌಡಿ ರೋಹಿತ್ ಗ್ಯಾಂಗ್ನಲ್ಲಿ ಗುರುತಿಸಿಕೊಂಡಿದ್ದ. ಇತ್ತೀಚೆಗೆ ಇವರು ಗ್ಯಾಂಗ್ ವಾರ್ ನಡೆಸಿದ್ದರು. ಗ್ಯಾಂಗ್ ವಾರ್ನಲ್ಲಿ ಭಾಗಿಯಾದ ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿರೆಸಿ ಮನುವನ್ನು ಬಂಧಿಸಿದ್ದರು. ಬಳಿಕ ಮಹಜರ್ಗೆ ಕರೆದುಕೊಂಡು ಹೋಗಲಾಗಿತ್ತು.
ಮಹಜರ್ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗ್ತಿದ್ದ ಮನುಗೆ ಶರಣಾಗುವಂತೆ ಸೂಚಿಸಿ ಸಿಪಿಐ ದಿನೇಶ್ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೆ, ರೌಡಿಶೀಟರ್ ಮನು ಶರಣಾಗದೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದನು. ಈ ವೇಳೆ ಮನು ಕಾಲಿಗೆ ಗುಂಡು ಸಿಪಿಐ ದಿನೇಶ್ ಗುಂಡು ಹಾರಿಸಿದ್ದಾರೆ. ಸದ್ಯ ಮನುಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ : ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?