ಬೆಂಗಳೂರು : ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದ್ದು, ಈ ಘಟನೆಯಿಂದ ನದಿ ಪಾತ್ರದ ಜನರಲ್ಲಿ ಭಾರೀ ಆತಂಕ ಮೂಡಿಸಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ತುಂಗಭದ್ರಾ ಡ್ಯಾಂ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾಗಿದೆ. ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದೆ. ಹೂಳು ತುಂಬಿದ್ದಾಗ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಸಮಾನಾಂತರವಾದ ಡ್ಯಾಂ ಕಟ್ಟಬೇಕು ಅಂತ ನಮ್ಮ ಅವಧಿಯಲ್ಲಿ ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು ಎಂದಿದ್ದಾರೆ.
ಇನ್ನು ಡ್ಯಾಂ ಮ್ಯಾನೇಜ್ಮೆಂಟ್ ಕಮಿಟಿ ಇರುತ್ತದೆ. ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆಗಳನ್ನು ಕೊಟ್ಟಿರುತ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನ್ಸುತ್ತೆ ಎಂದು ತಿಳಿಸಿದ್ದಾರೆ.
ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಮತ್ತು ಜನರ ಸೇಫ್ಟಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ.
ಇದನ್ನೂ ಓದಿ : ದರ್ಶನ್ ಅನುಪಸ್ಥಿತಿ ಬೇಸರವಾಗ್ತಿದೆ – ದಾಸನ ನೆನೆದು ತರುಣ್ ಸುಧೀರ್ ಭಾವುಕ..!