Download Our App

Follow us

Home » ಅಪರಾಧ » ಪ್ರಜ್ವಲ್ ರೇವಣ್ಣ ಕೇಸ್​ಗೆ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಯಲು..!

ಪ್ರಜ್ವಲ್ ರೇವಣ್ಣ ಕೇಸ್​ಗೆ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಯಲು..!

ಬೆಂಗಳೂರು : ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.  ಹಂಚಿಕೆಯಾಗಿರುವ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಅಸಲಿ ಎನ್ನುವುದು ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು, ಈ ಮೊದಲು ಅವುಗಳನ್ನು ಎಡಿಟ್ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ​ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್​, ಮಾರ್ಫ್​ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಿದೆ.

ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಆದರೆ, ಆ ವಿಡಿಯೋ ನಕಲಿ, ವಿರೋಧಿಗಳು ಎಡಿಟ್, ಮಾರ್ಫಿಂಗ್​ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಎಸ್​ಐಟಿ ವಿಡಿಯೋಗಳ ಅಸಲಿಯತ್ತು ತಿಳಿಯಲು ಎಫ್​ಎಸ್​ಎಲ್​ಗೆ ಕಳುಹಿಸಿತ್ತು.

ಇದೀಗ ವಿಡಿಯೋಗಳ ಎಫ್​ಎಸ್​ಎಲ್​ ವರದಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋ ಅಸಲಿ ಎಂಬುದು ಸಾಬೀತಾಗಿದೆ. ​​ಆದ್ರೆ ಆ ವಿಡಿಯೋಗಳು ಬಂಧಿತ ಆರೋಪಿಯದ್ದೇ ಎಂದು ಸಾಬೀತಾಗಿಲ್ಲ. ಈ ಪ್ರಕರಣದ ಸಂಬಂಧ ಮತ್ತಷ್ಟು ವರದಿ ಬರಬೇಕಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ – ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ..!

Leave a Comment

DG Ad

RELATED LATEST NEWS

Top Headlines

ನಕಲಿ ನಕ್ಷೆ ಸೃಷ್ಟಿಸಿ ಕಟ್ಟಡ ನಿರ್ಮಾಣ – ಮಾಲೀಕನ ವಿರುದ್ಧ FIR ದಾಖಲು..!

ಬೆಂಗಳೂರು : ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಕಲಿ ನಕ್ಷೆ ತಯಾರಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಜರಾಜೇಶ್ವರಿನಗರ

Live Cricket

Add Your Heading Text Here