ದೇವನಹಳ್ಳಿ : ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸಿದ್ದೆನಾಯಕನಹಳ್ಳಿ ಬಳಿ ಹೆದ್ದಾರಿಯಲ್ಲಿ ಯೂ ಟರ್ನ್ ಮಾಡಲು ನಿಂತಿದ್ದ ಬುಲೆಟ್ ಬೈಕ್ ಸವಾರ, ಈ ವೇಳೆ ಮತ್ತೊಂದು ಬೈಕ್ ಹಿಂದಿನಿಂದ ಬಂದು ಡಿಕ್ಕಿಯಾಗಿದೆ.
ಅಪಘಾತದಲ್ಲಿ ಬುಲೆಟ್ ಬೈಕ್ ನಜ್ಜುಗುಜ್ಜಾಗಿದ್ದು ಸವಾರನಿಗೆ ಗಂಭೀರ ಗಾಯವಾಗಿದ್ದು, ಡಿಕ್ಕಿಯ ರಭಸಕ್ಕೆ ಬುಲೆಟ್ ಬೈಕ್ ಸವಾರ ನೂರು ಮೀಟರ್ ದೂರ ಹೋಗಿ ಬಿದ್ದಿದ್ದಾನೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬುಲೆಟ್ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ವತ್ರೆಯಲ್ಲಿ ಗಾಯಾಳು ಸವಾರನಿಗೆ ಚಿಕಿತ್ಸೆ ನಡೆಯುತ್ತಿದೆ.
ಇದನ್ನೂ ಓದಿ : ‘ಮಾರ್ಟಿನ್’ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ನಿಂದ ಯು/ಎ ಸರ್ಟಿಫಿಕೇಟ್ – ಅ.11ಕ್ಕೆ ವಿಶ್ವದಾದ್ಯಂತ ಸಿನಿಮಾ ರಿಲೀಸ್..!
Post Views: 352