Download Our App

Follow us

Home » ಮೆಟ್ರೋ » ರಾಜಧಾನಿ ಬೆಂಗಳೂರಿನಲ್ಲಿ‌ ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ…!

ರಾಜಧಾನಿ ಬೆಂಗಳೂರಿನಲ್ಲಿ‌ ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ…!

ಬೆಂಗಳೂರು : ಡೆಂಗ್ಯೂ ಜ್ವರಕ್ಕೆ ನಗರದಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಸಿ.ವಿ.ರಾಮನ್ ನಗರದ ವಾಸಿ ಅಭಿಲಾಷ್‌ (27) ಡೆಂಗ್ಯೂ ಜ್ವರಕ್ಕೆ ಬಲಿಯಾದ ಯುಕನಾಗಿದ್ದಾನೆ. ಜೂ.25 ರಂದು ನಗರದ ಖಾಸಗಿ ಆಸ್ಪತ್ರೆಗೆ ಅಭಿಲಾಷ್ ದಾಖಲಾಗಿದ್ದ.
ಪರೀಕ್ಷೆಯಲ್ಲಿ ಡೆಂಗ್ಯೂ ಸೋಂಕು ದೃಢವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಜೂ.27ರಂದು ಮೃತಪಟ್ಟಿದ್ದಾನೆ.

ನೀರಜಾದೇವಿ (80) ಮೃತಪಟ್ಟ ಮತ್ತೊರ್ವ ದುರ್ದೈವಿ. ತಮಿಳುನಾಡಿನ ಮೂಲದ ನೀರಜಾದೇವಿ ಅವರು ಸ್ತನ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಜೂ.20 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಡೆಂಘೀ ಇರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜೂ.23ರಂದು ಮೃತಪಟ್ಟಿದ್ದಾರೆ. ನಗರದಲ್ಲಿ ಈವರೆಗೆ ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿಯಾಗಿದ್ದು, ಕಳೆದ ವರ್ಷ 9 ಮಂದಿ ಬಲಿಯಾಗಿದ್ದರು.

ಇನ್ನು ಸಾವಿನ ಜತೆಗೆ ಬೆಂಗಳೂರಿನಲ್ಲಿ ಡೆಂಗ್ಯೂ ಕೇಸ್​​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲೇ 2457 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಸದ್ಯ ಡೆಂಗ್ಯೂ ಆರ್ಭಟ ಬಿಬಿಎಂಪಿಗೆ ನಿದ್ದೆಗೆಡಿಸಿದೆ. ಮನೆ ಸರ್ವೇ ನಡೆಸಿ, ಡೆಂಗ್ಯೂ ಓಟಕ್ಕೆ ಬ್ರೇಕ್ ಹಾಕಲು ಮುಂದಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 14 ಲಕ್ಷ ಮನೆಗಳ ಸರ್ವೇಗೆ ಟಾಸ್ಕ್ ನೀಡಲಾಗಿದೆ. ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಪ್ರತಿ ಶುಕ್ರವಾರ ಮನೆಗಳಿಗೆ ಭೇಟಿ ನೀಡಿ, ಸೊಳ್ಳೆಗಳ ಲಾರ್ವಾ ಪತ್ತೆ ಹಚ್ಚುತ್ತಿದ್ದಾರೆ. ಮನೆಯ ಅಕ್ಕ-ಪಕ್ಕ ನೀರು ನಿಲ್ಲದಂತೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಪಾಲಿಕೆ ಟೀಮ್​ನ ಜೊತೆ ನರ್ಸಿಂಗ್ ಸ್ಟೂಡೆಂಟ್ಸ್, ಸ್ವಯಂ ಸೇವಕರು ಕೈ ಜೋಡಿಸಿದ್ದಾರೆ.

ಇದನ್ನೂ ಓದಿ : ಪರಪ್ಪನ ಅಗ್ರಹಾರಕ್ಕೆ ದರ್ಶನ್ ನೋಡಲು ಬಂದಿದ್ದು ನಟಿ ಸೋನಾಲ್ ಮೊಂಥೆರೋನಾ?

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here