Download Our App

Follow us

Home » ಅಪರಾಧ » ಸನಾತನ ಧರ್ಮದ ವಿರುದ್ದ ಅವಹೇಳನಕಾರಿ ಹೇಳಿಕೆ – ಇಂದು ಉದಯನಿಧಿ ಬೆಂಗಳೂರು ಕೋರ್ಟ್‌ ಮುಂದೆ ಹಾಜರ್‌..!

ಸನಾತನ ಧರ್ಮದ ವಿರುದ್ದ ಅವಹೇಳನಕಾರಿ ಹೇಳಿಕೆ – ಇಂದು ಉದಯನಿಧಿ ಬೆಂಗಳೂರು ಕೋರ್ಟ್‌ ಮುಂದೆ ಹಾಜರ್‌..!

ಬೆಂಗಳೂರು : ಸನಾತನ ಧರ್ಮದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕ್ರೀಡಾ ಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಇಂದು ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನ್ಯಾಯಾಲಯಕ್ಕೆ ಹಾಜರಾಗಲು ಸೋಮವಾರ ರಾತ್ರಿಯೇ ಉದಯನಿಧಿ ಅವರು ಬೆಂಗಳೂರಿನ ಕಡೆ ಪ್ರಯಾಣ ಬೆಳೆಸಿದ್ದರು.

2023ರ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದ ಉದಯನಿಧಿ, ‘ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೊನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಅನೇಕರು ಖಂಡಿಸಿದ್ದು, ಉದಯನಿಧಿ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ : ಉಮಾಪತಿಗೌಡಗೆ ಬೆದರಿಕೆ ಹಾಕಿದ್ದ ಡೇಂಜರ್​ ಗ್ಯಾಂಗ್​​ನ ಮೆಂಬರ್​​ ಚೇತನ್​​ ಅರೆಸ್ಟ್​​​..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here