ಉಡುಪಿ : ಭೀಕರ ರಸ್ತೆ ಅಪಘಾತದಲ್ಲಿ ಈಚರ್ ಲಾರಿ ಹೊತ್ತಿ ಉರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಬಲೈಪಾದೆ ಬಳಿ ನಡೆದಿದೆ. ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ ಮೃತ ದುರ್ದೈವಿ.
ಪ್ಲೈವುಡ್ ಕೊಂಡೊಯ್ಯುತ್ತಿದ್ದ ಈಚರ್ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದಿದ್ದು, ಢಿಕ್ಕಿ ರಭಸಕ್ಕೆ ಲಾರಿಯು ಬೈಕನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಪರಿಣಾಮ ಬೆಂಕಿ ಕಾಣಿಸಿಕೊಂಡಿತ್ತು. ಈ ಬೆಂಕಿ ಲಾರಿಗೆ ತಗಲಿದ್ದು ಬಳಿಕ ಬೆಂಕಿಯ ಕೆನ್ನಾಲಿಗೆ ಇಡೀ ಲಾರಿ ಮತ್ತು ದ್ವಿಚಕ್ರ ವಾಹನವನ್ನು ಸುಟ್ಟು ಭಸ್ಮ ಮಾಡಿದೆ. ಸ್ಥಳಕ್ಕೆ ಉಡುಪಿ ಸಂಚಾರ ಪೋಲೀಸರು ಆಗಮಿಸಿ ಪರಿಶೀಲ ನಡೆಸಿದ್ದಾರೆ.
ಇದನ್ನೂ ಓದಿ : ಕನೌಜ್ ರೈಲು ನಿಲ್ದಾಣದಲ್ಲಿ ಮೇಲ್ಛಾವಣಿ ಕುಸಿತ – 23 ಕಾರ್ಮಿಕರ ರಕ್ಷಣೆ, ಮುಂದುವರಿದ ಕಾರ್ಯಾಚರಣೆ..!
Post Views: 13