Download Our App

Follow us

Home » ಜಿಲ್ಲೆ » ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್​ ಮುಳುಗಡೆ – 7 ಮಂದಿ ಮೀನುಗಾರರ ರಕ್ಷಣೆ..!

ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್​ ಮುಳುಗಡೆ – 7 ಮಂದಿ ಮೀನುಗಾರರ ರಕ್ಷಣೆ..!

ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟೊಂದು ಭಟ್ಕಳ ಸಮೀಪ ತೆಂಗಿನಗುಂಡಿ ಬಂದರು ಬಳಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದು ಮುಳುಗಡೆಗೊಂಡಿದ್ದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಬೋಟಿನ ತಂಡೇಲ ದೇವೆಂದ್ರ ಮಂಜು ಮೊಗೇರ ಸೇರಿದಂತೆ ಕಲಾಸಿಗಳಾದ ಧನಂಜಯ ಮೊಗೇರ, ಸುಧೀರ್ ಕೃಷ್ಣ ಆಚಾರಿ, ನರಸಿಂಹ ಗೋವಿಂದ ಮೊಗೇರ, ನವೀನ್ ಗೊಂಡ, ನಾಗಪ್ಪ ಮೊಗೇರ, ಅನಿಲ್ ಬಾರೋ ಎನ್ನುವವರನ್ನು ರಕ್ಷಿಸಲಾಗಿದೆ.

ಉಡುಪಿ ಕೊಡವೂರಿನ ಸವಿತಾ ಎಸ್.ಸಾಲ್ಯಾನ್ ಅವರಿಗೆ ಸೇರಿದ ಶ್ರೀ ಕುಲಮಹಾಸ್ತ್ರಿ ಫಿಶರೀಸ್ ಬೋಟಿನಲ್ಲಿ ಈ ತಂಡ ಸೆಪ್ಟೆಂಬರ್‌ 5ರಂದು ಬೆಳಗ್ಗೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದರು. ಬೈಂದೂರಿನ ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಒಂದು ಟ್ರಾಲ್ ಮುಗಿಸಿ 2ನೇ ಟ್ರಾಲ್ ಹಾಕಿ ಬಲೆಯನ್ನು ಎಳೆದುಕೊಳ್ಳುವಾಗ ಆಕಸ್ಮಿಕವಾಗಿ ಬೋಟಿನ ಫ್ಯಾನಿಗೆ ಬಲೆ ಬಿದ್ದು ಎಂಜಿನ್ ಸ್ಥಗಿತಗೊಂಡಿತು.

ಬೋಟನ್ನು ಚಾಲನಾ ಸ್ಥಿತಿಯಲ್ಲಿ ತರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆ ವೇಳೆ ಸಮೀಪದಲ್ಲಿದ್ದ ಸಾಯಿ ಸಾಗರ ಬೋಟಿನವರು ನೆರವಿಗೆ ಧಾವಿಸಿ ಬಂದು ಫ್ಯಾನಿಗೆ ಸಿಕ್ಕಿಕೊಂಡ ಬಲೆಯನ್ನು ಬಿಡಿಸಲು ಪ್ರಯತ್ನಿಸಿದರೂ ವಿಫಲವಾಗಿತ್ತು. ಬಳಿಕ ಸಮೀಪದ ಭಟ್ಕಳ ತೆಂಗಿನಗುಂಡಿ ಬಂದರಿಗೆ ಹಗ್ಗದ ಸಹಾಯದಿಂದ ಎಳೆದುಕೊಂಡು ತರುವಾಗ ಬಂದರು ಬಳಿಯ ಅಳಿವೆಯಲ್ಲಿ ಸಂಜೆ ಸುಮಾರು 6 ಗಂಟೆ ವೇಳೆಗೆ ಹಗ್ಗ ತುಂಡಾಗಿ ಬೋಟು ನಿಯಂತ್ರಣ ತಪ್ಪಿ ಕಲ್ಲಿಗೆ ಬಡಿದಿದೆ. ಸೀ ವಾಕ್‌ ಮಾದರಿಯಲ್ಲಿದ್ದ ಕಲ್ಲಿನ ಮೇಲಿಂದ ಬೋಟನ್ನು ಎಳೆಯಲು ಸಾಧ್ಯವಾಗದೆ, ಬೋಟು ಕಲ್ಲಿಗೆ ತಾಗಿ ಸಂಪೂರ್ಣ ಜಖಂಗೊಂಡಿದ್ದು ಸುಮಾರು 60 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ.

ಇದನ್ನೂ ಓದಿ : ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯ ಭೀಕರ ಹತ್ಯೆ..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here