ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯೋರ್ವಳ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಮತ್ತು ಸಹಕರಿಸಿದ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಸಂತ್ರಸ್ತೆ ಮತ್ತು ಆರೋಪಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿತ್ತು. ನಿನ್ನೆ ಮಧ್ಯಾಹ್ನ ಯುವತಿಯನ್ನ ಕಾರಿನಲ್ಲಿ ಕರೆದೊಯ್ದು ಮೊದಲು ಅಮಲು ಪದಾರ್ಥ ನೀಡಿ ಓರ್ವ ಅತ್ಯಾಚಾರ ಎಸಗಿದ್ದು, ನಂತರ ಇನ್ನಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಒಟ್ಟು ಮೂರು ಮಂದಿ ಈ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಯುವತಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ FIR ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಮತ್ತು ಸಹಕರಿಸಿದ ಮತ್ತೊಬ್ಬ ಆರೋಪಿ ಅರೆಸ್ಟ್ ಮಾಡಿದ್ದು, ಇನ್ನೊಬ್ಬ ಆರೋಪಿಗೆ ಬೀಸಿದ್ದಾರೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಮುಖವಾಡ ಕಳಚಿದೆ, ಅವರು ರಾಜೀನಾಮೆ ಕೊಡ್ಲೇಬೇಕು – ಬಿ.ವೈ ವಿಜಯೇಂದ್ರ..!