ಉಡುಪಿ : ರಾಜ್ಯದ ಹಲವೆಡೆ ಭಾರಿ ಮಳೆ ಆಗುತ್ತಿದ್ದು, ಉಡುಪಿಯಲ್ಲೂ ವರುಣಾರ್ಭಟ ಜೋರಾಗಿದೆ. ಅದರಂತೆ ನಿನ್ನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸುರುಗಟ್ಟಿ ಸಾವನ್ನಪ್ಪಿದ್ದಾರೆ.
ಹಳ್ಳಿ ಬೇರು ನಿವಾಸಿ ಅಂಬಾ (55) ಮೃತಪಟ್ಟವರು. ನಿರಂತರ ಮಳೆಯಿಂದ ಅಂಬಾ ಅವರ ಮನೆ ಹಿಂಬದಿಯ ಗುಡ್ಡ ಪ್ರದೇಶ ಸಡಿಲಗೊಂಡಿತ್ತು. ನಿನ್ನೆ ಏಕಾಏಕಿ ಕುಸಿದು ಬಿದ್ದು ಈ ದುರ್ಘಟನೆ ಸಂಭವಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಭಾರಿ ಮಳೆ 2ನೇ ಬಲಿಯಾಗಿದೆ. ಇನ್ನು ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತದೇಹವನ್ನ ಮೇಲಕ್ಕೆತ್ತಲಾಗಿದೆ. ಕೊಲ್ಲೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಳಿ ಮಳೆಗೆ ತತ್ತರಿಸಿದ ರಟ್ಟಾಡಿ : ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ವ್ಯಾಪ್ತಿಗೆ ಬರುವ ಅಮಾವಾಸೆಬೈಲಿನ ರಟ್ಟಾಡಿ ಗ್ರಾಮ ನಿನ್ನೆ ಸಂಭವಿಸಿದ ಭಾರೀ ಗಾಳಿ ಮಳೆಗೆ ತತ್ತರಿಸಿ ಹೋಗಿದೆ. ನೂರಾರು ವರ್ಷಗಳಿಂದ ಬೆಳೆದು ನಿಂತ ಮರಗಳು, ಕೃಷಿಗಾಗಿ ಬೆಳೆಸಿದ ಅಡಿಕೆ ಮರಗಳು, ವಾಣಿಜ್ಯ ಬೆಳೆಗಳು, ತೆಂಗು ಹಲಸು ಮಾವು ಗೇರು ಮರಗಳು ನೆಲಸಮವಾಗಿದೆ.
ಇದನ್ನೂ ಓದಿ : ಡೇವಿಡ್ ಅವರ “ಪೆನ್ ಡ್ರೈವ್”ನಲ್ಲಿ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ..!