ಬೆಂಗಳೂರು : JDS ಕಾರ್ಯಕರ್ತರ ಜೊತೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಯವರು ಇಂದು ಮೀಟಿಂಗ್ ನಡೆಸಲಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ JDS ಕಾರ್ಯಕರ್ತರ ಜೊತೆ HDK ಸಭೆ ಮಾಡ್ತಿದ್ದು, ಬೆಳಗ್ಗೆ 11 ಗಂಟೆಗೆ ಜೆಪಿ ಭವನದಲ್ಲಿ ಮೀಟಿಂಗ್ ನಡೆಯಲಿದೆ.
ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಲೋಕಲ್ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ಸಾಧ್ಯತೆಯಿದೆ. ಇನ್ನು ಸಭೆಯಲ್ಲಿ ಹಾಲಿ, ಮಾಜಿ ಶಾಸಕರು, ಸಂಸದರು ಸೇರಿದಂತೆ ಮುಖಂಡರು ಭಾಗಿಯಾಗುವ ಸಾಧ್ಯತೆಯಿದೆ.
ಸಭೆ ಬಳಿಕ ಕೇಂದ್ರ ಸಚಿವ ಹೆಚ್ಡಿಕೆ ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಮೊದಲ ಬಾರಿಗೆ ದಳಪ ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡ್ತಿದ್ದು, ಇದರೊಂದಿಗೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ.
ಇದನ್ನೂ ಓದಿ : ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ಭಾರತ-ಪಾಕ್ ಹೈವೋಲ್ಟೇಜ್ ಕದನ..!
Post Views: 63