ಆರಂಭದಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರ ಫೆಬ್ರವರಿ 7 ರಂದು ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ.
ಬಿಡುಗಡೆಗೂ ಪೂರ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಾಯಕ ಮಿಲಿಂದ್, ನಿರ್ಮಾಪಕ ಮಂಜುನಾಥ್ ದಾಸೇಗೌಡ ಹಾಗೂ ಚಿತ್ರತಂಡದ ಸದಸ್ಯರು ಶ್ರೀಮಂಜುನಾಥಸ್ವಾಮಿಯ ದರ್ಶನ ಮಾಡಿ, ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.
ಈ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ನಲ್ಲಿ ಮಂಜುನಾಥ ಡಿ ಹಾಗೂ ಗಿರೀಶ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಶೋಭರಾಜ್, ಸಾಧು ಕೋಕಿಲ, ಅವಿನಾಶ್ ಮತ್ತು ರಮೇಶ್ ಭಟ್ ಮುಂತಾದ ಹಿರಿಯ ನಟರು ಅಭಿಯಿಸಿದ್ದಾರೆ. ಜೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದು, ಅಜಯ್ ಕುಮಾರ್ ಸಂಕಲನ, ಲವಿತ್ ಛಾಯಾಗ್ರಹಣ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನವಿದೆ. ಮುರುಳಿ, ಧನಂಜಯ ಅವರ ನೃತ್ಯ ನಿರ್ದೇಶನವಿದೆ.
ಇದನ್ನೂ ಓದಿ : ಯಶ್ ಮಾತಿಗೆ ಕೆಂಡವಾದ ಸುದೀಪ್ ಫ್ಯಾನ್ಸ್.. ಅಭಿಮಾನಿಗಳ ಬೆನ್ನಿಗೆ ನಿಂತ ಕಿಚ್ಚ ಸುದೀಪ್..!