ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ಬೆಳಕಿಗೆ ಬಂದಿದೆ. ನಡುರಸ್ತೆಯಲ್ಲಿ ಕಾರೊಂದನ್ನು ಅಡ್ಡಗಟ್ಟಿದ ಮೂವರು ಯುವಕರು ಕಾರಿನ ಬಾನೆಟ್ ಮೇಲೆ ಹತ್ತಿ, ವಿಂಡ್ಶೀಲ್ಡ್ಗೆ ಕಾಲಿನಿಂದ ಒದ್ದು ಪುಂಡಾಟ ಮೆರೆದಿರುವ ಘಟನೆ ಕೋರಮಂಗಲ ವ್ಯಾಪ್ತಿಯಲ್ಲಿ ನಡೆದಿದೆ.
2024ರ ಡಿ.28ರಂದು ಕೋರಮಂಗಲ ಬಳಿ ಈ ಘಟನೆ ನಡೆದಿದ್ದು, ಮತ್ತೊಂದು ಕಾರಿನ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಪುಂಡರ ಅಟ್ಟಹಾಸದ ದೃಶ್ಯ ಸೆರೆಯಾಗಿದೆ. ಈ ವಿಡಿಯೊವನ್ನು ಎಕ್ಸ್ ಖಾತೆಯಲ್ಲಿ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರಾಣಬಿಟ್ಟ 7 ಭಕ್ತರು – ಕಾಲ್ತುಳಿತ ಸ್ಥಳಕ್ಕೆ ಇಂದು ಸಿಎಂ ಚಂದ್ರಬಾಬು ನಾಯ್ಡು ಭೇಟಿ..!
Post Views: 1,376