ಸ್ಯಾಂಡಲ್ವುಡ್ನ ರಿಯಲ್ ಸ್ಟಾರ್, ನಟ ಉಪೇಂದ್ರ ಅಭಿನಯದ ‘ಯುಐ’ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ನಟ ಉಪೇಂದ್ರ ಭೇಟಿ ನೀಡಿದ್ದಾರೆ.
‘ಯುಐ’ ವಾರ್ನರ್‌ಗೆ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ಗೂ ಸಿದ್ಧವಾಗಿದ್ದು, ಈ ಹಿನ್ನೆಲೆ ಉಪೇಂದ್ರ ಅವರು ಕಟೀಲು ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ ಹಾಗೂ ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ.
ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಇನ್ನೂ ಇಂದು (ಡಿ.3) ಸಂಜೆ ಮಂಗಳೂರಿನಲ್ಲಿ ನಡೆಯಲಿರುವ ‘ಯುಐ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಪಾಲ್ಗೊಳ್ಳಲಿದೆ.
ಅಂದಹಾಗೆ, AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.
ಇದನ್ನೂ ಓದಿ : ‘ಅಯೋಗ್ಯ2’ಗೆ ಮುಹೂರ್ತ ಫಿಕ್ಸ್ – ಮತ್ತೆ ಒಂದಾದ ಸ್ಯಾಂಡಲ್ವುಡ್ ಸೂಪರ್ ಹಿಟ್ ಜೋಡಿ ರಚಿತಾ-ನಿನಾಸಂ ಸತೀಶ್..!