Download Our App

Follow us

Home » ಸಿನಿಮಾ » ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹುನಿರೀಕ್ಷಿತ ‘UI’ ಚಿತ್ರ ಅಕ್ಟೋಬರ್​​ನಲ್ಲಿ ತೆರೆಗೆ..!

ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹುನಿರೀಕ್ಷಿತ ‘UI’ ಚಿತ್ರ ಅಕ್ಟೋಬರ್​​ನಲ್ಲಿ ತೆರೆಗೆ..!

ಸ್ಯಾಂಡಲ್‌ವುಡ್‌ನ ರಿಯಲ್​​ ಸ್ಟಾರ್ ಉಪೇಂದ್ರ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ದಿನದಂದು ಅವರು ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ “UI” ಚಿತ್ರದ ವಿಭಿನ್ನ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಪೋಸ್ಟರ್ ಬಿಡುಗಡೆ ಬಳಿಕ ರಿಯಲ್​​ ಸ್ಟಾರ್​​ ಉಪೇಂದ್ರ ಅವರು “UI” ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ನನ್ನ‌ ಹುಟ್ಟುಹಬ್ಬಕ್ಕೆ ಹಾರೈಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತು ಆರಂಭಿಸಿದ ಉಪೇಂದ್ರ ಅವರು, ಐದಾರು ಮದುವೆ ಆಗಬಹುದು. ಆದರೆ ಒಂದು ಚಿತ್ರ ನಿರ್ದೇಶನ ಮಾಡುವುದು ಅದಕ್ಕಿಂತ ಕಷ್ಟ. ಇನ್ನೂ ನಾನು ಬಹಳ ವರ್ಷಗಳ ನಂತರ ನಿರ್ದೇಶಿಸಿರುವ “UI” ಚಿತ್ರ ಬಿಡುಗಡೆಯ ಹಂತಕ್ಕೆ ತಲುಪಿದೆ. ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿರುವ ನಿರ್ಮಾಪಕರು ಅಕ್ಟೋಬರ್​​ನಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ. ತಾಂತ್ರಿಕ(ಟೆಕ್ನಿಕಲ್) ಕಾರ್ಯಗಳು ಹೆಚ್ಚಾಗಿರುವುದು ಹಾಗೂ ಸಿನಿಮಾ ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಬರುತ್ತಿರುವುದರಿಂದ ಬಿಡುಗಡೆ ಸ್ವಲ್ಪ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಜನರು ಯಾವಗಲೂ ನನಗೆ ತಲೆಯಲ್ಲಿ ಹುಳ ಬಿಡುತ್ತೀರಾ ಎನ್ನುತ್ತಾರೆ. ಅದರೆ ಈ ಚಿತ್ರದಲ್ಲಿ ಹುಳ ತೆಗೆಯುವ ಕೆಲಸ ಮಾಡುತ್ತಿದ್ದೇನೆ. ಪ್ರೇಕ್ಷಕರು ನಮಗಿಂತ ತುಂಬಾ ಬುದ್ದಿವಂತರು. ಅವರ ನಿರೀಕ್ಷೆ ಹೆಚ್ಚು ಇರುತ್ತದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ “UI” ಉತ್ತಮ ಚಿತ್ರವಾಗಿ ಬರಲಿದೆ ಎಂದರು.

ಇನ್ನು ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ಮಾಪಕ ಜಿ.ಮನೋಹರನ್, ಇದು ಪ್ಯಾನ್ ಇಂಡಿಯಾ ಚಿತ್ರವಾಗಿರುವುದರಿಂದ ಬಿಡುಗಡೆ ಸ್ವಲ್ಪ ತಡವಾಯಿತು.ಅಕ್ಟೋಬರ್​ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದರು.

ಚಿತ್ರದ ಬಗ್ಗೆ ಮಾಹಿತಿ ನೀಡಿದ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಅವರು, 25 ವರ್ಷಗಳ ನನ್ನ ಸಿನಿ ಜರ್ನಿಯಲ್ಲಿ ಶಿವಣ್ಣ ಅವರ ಜೊತೆಗಿನ ಒಡನಾಟ ಹಾಗೂ ಉಪೇಂದ್ರ ಅವರು ನಮ್ಮ ಬ್ಯಾನರ್​ನ ಚಿತ್ರವನ್ನು ನಿರ್ದೇಶಿಸಿರುವುದು ನನಗೆ ತುಂಬಾ ಖುಷಿಕೊಟ್ಟ ವಿಚಾರ. ಎಲ್ಲರಂತೆ ನಾನು ಉಪೇಂದ್ರ ಅವರ ನಿರ್ದೇಶನಕ್ಕೆ ಅಭಿಮಾನಿ. ಈ ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅವರ ಅಭಿಮಾನಿಗಳಂತೆ ನನಗೂ ಇದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು.

ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು(ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಅವರು “UI” ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಮಡರು.

ಇನ್ನು ಹುಟ್ಟುಹಬ್ಬದ ದಿನ ಉಪೇಂದ್ರ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ “UI” ಚಿತ್ರದ ಸುದ್ದಿಗೋಷ್ಠಿಯಲ್ಲಿ ನಟ, ನಿರ್ದೇಶಕ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್, ಕೆ.ಪಿ.ಶ್ರೀಕಾಂತ್, ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು(ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಕಲಾ ನಿರ್ದೇಶಕ ಶಿವಕುಮಾರ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಕರ್ನಾಟಕ ರಣಜಿ ಟೀಮ್​​​​ನ ಸಂಭವನೀಯರ ಪಟ್ಟಿಯಲ್ಲಿ ದ್ರಾವಿಡ್‌ ಪುತ್ರ ಸಮಿತ್‌ಗೆ ಸ್ಥಾನ..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here