“ಉತ್ತರಕಾಂಡ” ಚಿತ್ರದ ಚಿತ್ರೀಕರಣ ಮುಂದಿನ ವಾರದಲ್ಲಿ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ನಟರಾಕ್ಷಸ ಡಾಲಿ ಧನಂಜಯ್, ಉತ್ತರಕಾಂಡದ ನಿರ್ದೇಶಕ ರೋಹಿತ್ ಪದಕಿ ಮತ್ತು ನಿರ್ಮಾಪಕ ಕಾರ್ತಿಕ್ ಗೌಡ ಇಂದು ನುಗ್ಗೇಕೇರಿಯ ಶ್ರೀ ಹನುಮಂತ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ನುಗ್ಗೇಕೇರಿ ಶ್ರೀ ಹನುಮಂತ ದೇವಾಲಯ ಧಾರವಾಡದ ಪುರಾತನ ಮತ್ತು ಪ್ರಖ್ಯಾತ ದೇವಾಲಯವಾಗಿದೆ.
“ಉತ್ತರಕಾಂಡ” ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಹಾಗೂ ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬರಲಿದೆ.
ಇದನ್ನೂ ಓದಿ : ಕರ್ನಾಟಕ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು..!
Post Views: 258