ಕೇಂದ್ರ ಸರ್ಕಾರ ಹಿರಿಯ ಗಗನಯಾತ್ರಿ ಮತ್ತು ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ನೂತನ ಮುಖ್ಯಸ್ಥರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಇಸ್ರೋದ ಹಾಲಿ ಮುಖ್ಯಸ್ಥರಾಗಿರುವ ಎಸ್.ಸೋಮನಾಥ್ ಅವರು ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ ಜನವರಿ 14ರಂದು ನಿವೃತ್ತರಾಗಲಿದ್ದಾರೆ. ಆ ಬಳಿಕ ವಿ.ನಾರಾಯಣನ್ ಇಸ್ರೋದ ನೂತನ ಮುಖ್ಯಸ್ಥರಾಗಲಿದ್ದಾರೆ.
ವಿ.ನಾರಾಯಣನ್ ಕುರಿತು : ವಿ.ನಾರಾಯಣನ್ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್‌ಪಿಎಸ್‌ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (LPSC) ನಿರ್ದೇಶಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇವರು ಮುಂದಿನ ಎರಡು ವರ್ಷಗಳ ಅವಧಿಗೆ ಇಸ್ರೋ ಅಧ್ಯಕ್ಷ ಹುದ್ದೆಯಲ್ಲಿರುತ್ತಾರೆ.
ನಾರಾಯಣನ್ ಅವರು ಆದಿತ್ಯ ಬಾಹ್ಯಾಕಾಶ ನೌಕೆ ಮತ್ತು GSLV MK-III ಮಿಷನ್‌ನಂತಹ ಪ್ರಮುಖ ಯೋಜನೆಗಳಿಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಇವರ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಐಐಟಿ ಖರಗ್‌ಪುರದ ಬೆಳ್ಳಿ ಪದಕ, ಭಾರತದ ಆಸ್ಟ್ರೋನಾಟಿಕಲ್ ಸೊಸೈಟಿಯಿಂದ ‘ಶ್ರೀ ಪ್ರಶಸ್ತಿ (ಚಿನ್ನದ ಪದಕ)’ ಮತ್ತು IIT ಖರಗ್‌ಪುರದಿಂದ ‘ಡಿಸ್ಟಿಂಗ್ವಿಶ್ಡ್ ಅಲುಮ್ನಸ್ ಪ್ರಶಸ್ತಿ’, ಎನ್‌ಡಿಆರ್‌ಎಫ್‌ನಿಂದ ರಾಷ್ಟ್ರೀಯ ವಿನ್ಯಾಸ ಪ್ರಶಸ್ತಿಗಳು ಇವರಿಗೆ ಲಭಿಸಿದೆ.
ಇದನ್ನೂ ಓದಿ : ಕರ್ನಾಟಕದಲ್ಲಿಂದು ಐತಿಹಾಸಿಕ ಬೆಳವಣಿಗೆ – ಮುಂಡಗಾರು ಲತಾ ಸೇರಿ 6 ನಕ್ಸಲರು ಶರಣಾಗತಿ.. ಪ್ರಕ್ರಿಯೆ ಹೇಗಿರಲಿದೆ?