Download Our App

Follow us

Home » ಮೆಟ್ರೋ » ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಕೇಸ್​​- ಪ್ರಕರಣದ ತನಿಖೆಗೆ ED ಎಂಟ್ರಿ..!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಕೇಸ್​​- ಪ್ರಕರಣದ ತನಿಖೆಗೆ ED ಎಂಟ್ರಿ..!

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ED ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ.

ಇಡಿ ಜೈಲಿನಲ್ಲಿ ಇರುವ ಆರೋಪಿಗಳ ವಿಚಾರಣೆ ನಡೆಸಿದ್ದು, ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್‌ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ನಟ ಧನ್ವೀರ್ ವಿರುದ್ಧ ನಡೀತಾ ಪಿತೂರಿ? ತಮಾಷೆ ಫೋಟೋ ಹಾಕಿ ಟ್ರೋಲ್ ಮಾಡ್ತಿದ್ದಾರೆ ಕಾಣದ ಕೈಗಳು..!

Leave a Comment

DG Ad

RELATED LATEST NEWS

Top Headlines

ಚಿಕ್ಕಮಗಳೂರು : ತಾಯಿಯನ್ನ ಮನೆಗೆ ಕಳಿಸದ ಮಾವನ ಮೇಲೆ ನಡುರಸ್ತೆಯಲ್ಲೇ ಮಚ್ಚು ಬೀಸಿದ ಅಳಿಯ..!

ಚಿಕ್ಕಮಗಳೂರು : ತನ್ನ ತಾಯಿಯನ್ನ ಮನೆಗೆ ಕಳಿಸಲಿಲ್ಲ ಎಂದು ಕೋಪಗೊಂಡು ಅಳಿಯನೊಬ್ಬ ಮಾವನ ಮೇಲೆಯೇ ಬೀಸಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ನಡೆದಿದ್ದು,

Live Cricket

Add Your Heading Text Here