ಬೆಂಗಳೂರು : ಮಾಜಿ ಸಂಸದ ಡಿ.ಕೆ ಸುರೇಶ್ ಅವರ ತಂಗಿ ಎಂದು ನಂಬಿಸಿ 14 ಕೆಜಿ 600 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿಗಳಾದ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ ಬಂಧವಾಗಿದ್ದು, ಚಂದ್ರಲೇ ಔಟ್ ಪೊಲೀಸರು ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರೂ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಆದ್ರೆ ಡಿ.ಕೆ ಸುರೇಶ್ ಧ್ವನಿಯಲ್ಲಿ ಮಾತನಾಡಿ ಟೋಪಿ ಹಾಕಿದ್ದ ನಟ ಧರ್ಮೇಂದ್ರ ನಾಪತ್ತೆ ಆಗಿದ್ದಾನೆ. ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಸದ್ಯ ನಟ ಧರ್ಮೇಂದ್ರಗೆ ಪೊಲೀಸರು ನೋಟಿಸ್ ನೀಡಿದ್ದು ಶೋಧಕಾರ್ಯ ಮುಂದುವರೆಸಿದ್ದಾರೆ.
ಧಮೇಂದ್ರ ಡಿ.ಕೆ ಸುರೇಶ್ ವಾಯ್ಸ್‌ನಲ್ಲಿ ಕರೆ ಮಾಡಿ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರಾದ ವನಿತಾ ಐತಾಳ್‌ಗೆ ಸಮಯ ಕೇಳಿದ್ದರು. ಕೊನೆಗೆ ತಾನೇ ಧರ್ಮೇಂದ್ರನನ್ನ ಕಳುಹಿಸಿ ಕೊಲೆ ಮಾಡಿಸುವುದಾಗಿಯೂ ಬೆದರಿಕೆ ಹಾಕಿದ್ದರು. ಅವಾಚ್ಯ ಶಬ್ಧಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಜ್ಯುವೆಲರಿ ಮಾಲೀಕಾರದ ವನಿತಾ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ವನಿತಾ ಐತಾಳ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ನಿನ್ನೆ ಆರೋಪಿಗಳಿಬ್ಬರನ್ನ ಬಂಧಿಸಿದ್ದಾರೆ.
ಇದನ್ನೂ ಓದಿ : ಡಿ.ಕೆ ಸುರೇಶ್ ತಂಗಿ ಹೆಸರಲ್ಲಿ ವಂಚನೆ – ಐಶ್ವರ್ಯ ಗೌಡ, ಪತಿ ಹರೀಶ್ಗೆ 14 ದಿನ ನ್ಯಾಯಾಂಗ ಬಂಧನ..!