Download Our App

Follow us

Home » ಕ್ರೀಡೆ » ಇಂಗ್ಲೆಂಡ್‌ ವಿರುದ್ಧದ 4ನೇ ಟೆಸ್ಟ್‌ನಲ್ಲೂ ಭಾರತಕ್ಕೆ ರೋಚಕ ಜಯ – ಸರಣಿ ವಶಪಡಿಸಿಕೊಂಡ ರೋಹಿತ್ ಪಡೆ..!

ಇಂಗ್ಲೆಂಡ್‌ ವಿರುದ್ಧದ 4ನೇ ಟೆಸ್ಟ್‌ನಲ್ಲೂ ಭಾರತಕ್ಕೆ ರೋಚಕ ಜಯ – ಸರಣಿ ವಶಪಡಿಸಿಕೊಂಡ ರೋಹಿತ್ ಪಡೆ..!

ರಾಂಚಿ : ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ 4ನೇ ಮ್ಯಾಚ್​​ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ತಂಡ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ​ಈ ಗೆಲುವಿನೊಂದಿಗೆ ಭಾರತ ತಂಡವು ಸರಣಿಯಲ್ಲಿ 3-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಐದು ಟೆಸ್ಟ್​ಗಳ ಸರಣಿಯಲ್ಲಿ ಒಂದು ಪಂದ್ಯ ಬಾಕಿಯಿರುವಾಗಲೇ ಭಾರತ ಸರಣಿ ಗೆದ್ದಿದ್ದು, ರಾಜ್​ಕೋಟ್​ನಲ್ಲಿ ನಡೆದ ನಾಲ್ಕನೇ ಟೆಸ್ಟ್​ ಪಂದ್ಯವನ್ನು ನಾಲ್ಕನೇ ದಿನವಾದ ಇಂದು ಗೆಲ್ಲುವ ಮೂಲಕ ಐತಿಹಾಸಿಕ ಸರಣಿಯನ್ನು ರೋಹಿತ್ ಪಡೆ ತನ್ನದಾಗಿಸಿಕೊಂಡಿದೆ.

ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 192 ರನ್‌ಗಳ ಗುರಿ ಪಡೆದ ಭಾರತ 61 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿದೆ. 40 ರನ್‌ಗಳಿಂದ 4ನೇ ದಿನದ ಕ್ರೀಸ್ ಆರಂಭಿಸಿದ ಭಾರತ, ಆಂಗ್ಲರ ಸ್ಪಿನ್ ದಾಳಿಯ ನಡುವೆಯೂ ಗೆಲುವು ಸಾಧಿಸಿದೆ. ಈ ಮೂಲಕ ಭಾರತವು ತವರಿನಲ್ಲಿ ನಡೆದ ಸತತ 17 ಟೆಸ್ಟ್ ಸರಣಿಗಳನ್ನು ಗೆದ್ದ ವಿಶೇಷ ಸಾಧನೆ ಮಾಡಿದಂತಾಗಿದೆ.

ಇದನ್ನೂ ಓದಿ : ಸಿಎಂ ಸಿದ್ದು ಹಾಗೂ ಡಿಸಿಎಂ ಡಿಕೆಶಿಯನ್ನು ಭೇಟಿಯಾದ ಜನಾರ್ದನ ರೆಡ್ಡಿ – ಕುತೂಹಲ ಕೆರಳಿಸಿದ ಗಣಿ ಧಣಿ ನಡೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here