Download Our App

Follow us

Home » ಸಿನಿಮಾ » ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಮ್ ಅಕೌಂಟ್ ಮತ್ತೆ ಆಕ್ಟಿವ್​ – ಆದ್ರೆ ಕೊಟ್ರು ಹೊಸ ಟ್ವಿಸ್ಟ್‌ : ಏನದು?

ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಮ್ ಅಕೌಂಟ್ ಮತ್ತೆ ಆಕ್ಟಿವ್​ – ಆದ್ರೆ ಕೊಟ್ರು ಹೊಸ ಟ್ವಿಸ್ಟ್‌ : ಏನದು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇನ್ನೂ 19 ಮಂದಿ ಅರೆಸ್ಟ್ ಆಗಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ದರ್ಶನ್, ಕೊಲೆ ಪ್ರಕರಣದಲ್ಲಿ ಜೈಲು ಸೇರುತ್ತಿದ್ದಂತೆ ಅವರ ಆಪ್ತರು, ಕುಟುಂಬದವರು ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ.

ದರ್ಶನ್​ರ ಸಹೋದರ ಆಗಲಿ, ತಾಯಿಯಾಗಲಿ ಠಾಣೆಗೆ ಭೇಟಿ ನೀಡಿಲ್ಲ. ಇನ್ನು ಪತ್ನಿ ವಿಜಯಲಕ್ಷ್ಮಿ ದರ್ಶನ್ ಬಂಧನ ಆದ ದಿನವೇ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನೇ ಡಿ-ಆಕ್ಟಿವೇಟ್​ ಮಾಡಿದ್ದರು. ಆದರೆ ಈಗ ಮತ್ತೆ ಆಕ್ಟಿವ್ ಮಾಡಿದ್ದಾರೆ. ಇನ್ನು ತಾವು ಮಾಡಿದ್ದ ಎಲ್ಲ ಪೋಸ್ಟ್​ಗಳನ್ನು ಡಿಲೀಟ್ ಮಾಡಿದ್ದಾರೆ. ಫಾಲೋ ಮಾಡುತ್ತಿದ್ದವರನ್ನು ಸಹ ಅನ್​ಫಾಲೋ ಮಾಡಿ ಹೊಸ ಟ್ವಿಸ್ಟ್‌ ನೀಡಿದ್ದಾರೆ.

ಇನ್‌ಸ್ಟಾಗ್ರಾಮ್ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಿದ ಮೇಲೆ ಹಳೆಯ ಹೆಸರನ್ನೇ ಮುಂದುವರೆಸಿದ್ದಾರೆ. ಖಾತೆ ಹೆಸರು ‘ವಿಜಿ ದರ್ಶನ್’ ಎಂದೇ ಇದೆ. ಬಯೋನಲ್ಲಿ ವಿಜಯಲಕ್ಷ್ಮಿ ದರ್ಶನ್ ಎಂದಿದೆ. ಆದರೆ ಪ್ರೊಫೈಲ್ ಚಿತ್ರ, ಮಾಡಲಾಗಿದ್ದ ಪೋಸ್ಟ್​ಗಳೆಲ್ಲವನ್ನೂ ಸಹ ವಿಜಯಲಕ್ಷ್ಮಿ ಡಿಲೀಟ್ ಮಾಡಿದ್ದಾರೆ.

ದರ್ಶನ್​ ಪತ್ನಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಮ್​ ಅಕೌಂಟ್​ನಲ್ಲಿ ಸಾಕಷ್ಟು ಜನ ಅವರ ಹೆಸರಿಗೆ ಟ್ಯಾಗ್​​ ಮಾಡಿದ ವಿಡಿಯೋಗಳು ಮಾತ್ರ ಉಳಿದುಕೊಂಡಿವೆ. ಇದನ್ನು ನೋಡಿದ ಅಭಿಮಾನಿಗಳಲ್ಲಿ ಈ ಪ್ರಕರಣದ ಬಗ್ಗೆ ವಿಜಯಲಕ್ಷ್ಮಿ ಇನ್​ಸ್ಟಾ​ ಖಾತೆಯಲ್ಲಿ ಮಾಹಿತಿ ನೀಡುತ್ತಾರೆಯೇ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ : ದರ್ಶನ್ ಅರೆಸ್ಟ್​ ಬೆನ್ನಲ್ಲೇ ಹಾಸ್ಯನಟ ಚಿಕ್ಕಣ್ಣನಿಗೂ ಶುರುವಾಯ್ತು ಭೀತಿ – ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್..!​

 

 

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here