ಉಡುಪಿ : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಸಂಕಷ್ಟಗಳ ಸರಮಾಲೆಯೇ ಎದುರಾಗಿದೆ. ನಿನ್ನೆ ಕೋರ್ಟ್ ಕೂಡ ದರ್ಶನ್ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇನ್ನೊಂದೆಡೆ ಪೊಲೀಸರು ಕೊಲೆ ಪ್ರಕರಣದ ಚಾರ್ಜ್‌ಶೀಟ್ ರೆಡಿ ಮಾಡುತ್ತಿದ್ದಾರೆ.
ಇನ್ನು ನಟ ದರ್ಶನ್‌ಗೆ ಜಾಮೀನು ಕೊಡಿಸಲು ಕುಟುಂಬದವರು ಕಷ್ಟಪಡುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಭೇಟಿ ನೀಡುತ್ತಾ ಗಂಡನಿಗೆ ಧೈರ್ಯ ತುಂಬುತ್ತಿದ್ದಾರೆ. ಕಾನೂನಿನ ಹೋರಾಟದ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ.
ಈ ನಡುವೆ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದಾರೆ. ವಿವಿಧ ದೇವಾಲಯಗಳಿಗೆ ತೆರಳುತ್ತಿದ್ದಾರೆ. ಅಂತೆಯೇ ಕಳೆದ ರಾತ್ರಿ (ಜುಲೈ 25) ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆಪ್ತರ ಜೊತೆ ಮೂಕಾಂಬಿಕಾ ತಾಯಿಯ ದರ್ಶನ ಪಡೆದಿದ್ದಾರೆ.
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಪತಿ ದರ್ಶನ್‌ಗಾಗಿ ಇಂದು ವಿಜಯಲಕ್ಷ್ಮಿ ಚಂಡಿಕಾ ಹೋಮ ಮಾಡಿಸಲಿದ್ದಾರೆ. ಜೊತೆಗೆ ದೇವಸ್ಥಾನದಲ್ಲೇ ಸಂಕಲ್ಪ, ಪಾರಾಯಣ ಕೂಡ ನಡೆಯಲಿದೆ. ಇಂದು ಬೆಳಗ್ಗೆ ನವ ಚಂಡಿಕಾ ಹೋಮ ನಡೆಯಲಿದ್ದು, ದರ್ಶನ್ ಅವರು ಈ ಕಷ್ಟದ ಪರಿಸ್ಥಿತಿಯಿಂದ ಹೊರಬರಲಿ ಎಂದು ವಿಜಯಲಕ್ಷ್ಮಿ ಅವರು ದೇವರಲ್ಲಿ ಪ್ರಾರ್ಥನೆ ಮಾಡಲಿದ್ದಾರೆ.
ಇದನ್ನೂ ಓದಿ : ನಟ ದರ್ಶನ್‌ಗೆ ಜೈಲೂಟವೇ ಗತಿ – ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್..!