Download Our App

Follow us

Home » ಜಿಲ್ಲೆ » ವಿಜಯನಗರ : ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾ*ವು..!

ವಿಜಯನಗರ : ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾ*ವು..!

ವಿಜಯನಗರ : ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ. 4 ವರ್ಷದ ವಿರಾಟ್ ಮೃತ ಬಾಲಕ.

ಬಾಲಕನ ಮನೆ ಹತ್ತಿರದ ಖಾಲಿ ಜಾಗದಲ್ಲಿ ಚರಂಡಿ ನೀರು ನಿಂತಿತ್ತು. ಆಟವಾಡಲು ಹೋದ ಸಂದರ್ಭ ನೀರು ನಿಂತಿರುವುದನ್ನು ಗಮನಿಸದೇ ಬಾಲಕ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಇನ್ನು ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸುದ್ದಿ ತಿಳಿದು ಹೊಸಪೇಟೆ ಶಾಸಕ ಹೆಚ್‌ಆರ್ ಗವಿಯಪ್ಪ ಆಸ್ಪತ್ರೆಗೆ ಭೇಟಿ ನೀಡಿ ಮೃತ ಬಾಲಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪಟ್ಟಣದಲ್ಲಿ ಚರಂಡಿ ನೀರು ನಿಂತಿರೋ ಪ್ರದೇಶಗಳನ್ನು ಕೂಡಲೇ ಸ್ವಚ್ಛಗೊಳಿಸುವಂತೆ ನಗರಸಭೆ ಆಯುಕ್ತರಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ : ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಕಾಂಗ್ರೆಸ್​​​ ಸರ್ಕಾರವೇ ಹೊಣೆ – ಶಾಸಕ ಸುನೀಲ್​ ಕುಮಾರ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here