ಬೆಂಗಳೂರು : ರಾಜ್ಯದಲ್ಲಿ ಇದೀಗ ವಕ್ಫ್ ಆಸ್ತಿ ವಿವಾದ ಭಾರೀ ಸದ್ದು ಮಾಡುತ್ತಿದೆ. ವಿಜಯಪುರದಿಂದ ಆರಂಭವಾದ ವಿವಾದ ರಾಜ್ಯಾದ್ಯಂತ ಹಬ್ಬಿಕೊಂಡಿದೆ. ಆರಂಭದಲ್ಲಿ ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಬಳಿಕ ಮಠಕ್ಕೆ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವ ಮೂಲಕ ಆತಂಕ ಹೆಚ್ಚಿಸಿತ್ತು. ನಂತರದ ದಿನಗಳಲ್ಲಿ ಇದು ರಾಜಕೀಯ ಸ್ವರೂಪ ಕೂಡ ಪಡೆದುಕೊಂಡಿತ್ತು. ಇದೀಗ ಈ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ವಕ್ಫ್ ಜಮೀನು ವಿವಾದಕ್ಕೆ ಹಾವೇರಿಯಲ್ಲಿ ರೈತರು ಬಲಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಮಣ್ಣು ತಿನ್ನುವ ಕೆಲಸ ಮಾಡ್ತಿದೆ ಎಂದಿದ್ದಾರೆ.
ಇನ್ನು ರೈತ ವಿರೋಧಿ ಧೋರಣೆ ಕಾಂಗ್ರೆಸ್ಗೆ ಶಾಪ ಆಗಲಿದೆ. ರೈತರ ಆಸ್ತಿ ಕಬಳಿಸಲು ಜಮೀರ್ಗೆ ಯಾಕೆ ಗುತ್ತಿಗೆ ಕೊಡಬೇಕಾಗಿತ್ತು? ಕಾಂಗ್ರೆಸ್ ಸರ್ಕಾರ ರೈತರ ಜೀವನಕ್ಕೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದೆ ಎಂದು ಬೆಂಗಳೂರಿನಲ್ಲಿ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ಗುಡುಗಿದ್ದಾರೆ.
ಇದನ್ನೂ ಓದಿ : ಆ ಸ್ಟಾರ್ ನಟನ ಜೊತೆ ಹೊಂಬಾಳೆ ಟೈ ಅಪ್.. ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಣೆ..!