Download Our App

Follow us

Home » ರಾಜಕೀಯ » ರೈತ ವಿರೋಧಿ ಧೋರಣೆ ಕಾಂಗ್ರೆಸ್​ಗೆ ಶಾಪ ಆಗಲಿದೆ – ಸರ್ಕಾರದ ವಿರುದ್ಧ ಬಿ.ವೈ ವಿಜಯೇಂದ್ರ ಕಿಡಿ..!

ರೈತ ವಿರೋಧಿ ಧೋರಣೆ ಕಾಂಗ್ರೆಸ್​ಗೆ ಶಾಪ ಆಗಲಿದೆ – ಸರ್ಕಾರದ ವಿರುದ್ಧ ಬಿ.ವೈ ವಿಜಯೇಂದ್ರ ಕಿಡಿ..!

ಬೆಂಗಳೂರು : ರಾಜ್ಯದಲ್ಲಿ ಇದೀಗ ವಕ್ಫ್  ಆಸ್ತಿ ವಿವಾದ ಭಾರೀ ಸದ್ದು ಮಾಡುತ್ತಿದೆ. ವಿಜಯಪುರದಿಂದ ಆರಂಭವಾದ ವಿವಾದ ರಾಜ್ಯಾದ್ಯಂತ ಹಬ್ಬಿಕೊಂಡಿದೆ. ಆರಂಭದಲ್ಲಿ ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಬಳಿಕ ಮಠಕ್ಕೆ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವ ಮೂಲಕ ಆತಂಕ ಹೆಚ್ಚಿಸಿತ್ತು. ನಂತರದ ದಿನಗಳಲ್ಲಿ ಇದು ರಾಜಕೀಯ ಸ್ವರೂಪ ಕೂಡ ಪಡೆದುಕೊಂಡಿತ್ತು. ಇದೀಗ ಈ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ವಕ್ಫ್​ ಜಮೀನು ವಿವಾದಕ್ಕೆ ಹಾವೇರಿಯಲ್ಲಿ ರೈತರು ಬಲಿಯಾಗಿದ್ದಾರೆ. ಕಾಂಗ್ರೆಸ್​​ ಸರ್ಕಾರ ಮಣ್ಣು ತಿನ್ನುವ ಕೆಲಸ ಮಾಡ್ತಿದೆ ಎಂದಿದ್ದಾರೆ.

ಇನ್ನು ರೈತ ವಿರೋಧಿ ಧೋರಣೆ ಕಾಂಗ್ರೆಸ್​​​ಗೆ ಶಾಪ ಆಗಲಿದೆ. ರೈತರ ಆಸ್ತಿ ಕಬಳಿಸಲು ಜಮೀರ್​ಗೆ ಯಾಕೆ ಗುತ್ತಿಗೆ ಕೊಡಬೇಕಾಗಿತ್ತು? ಕಾಂಗ್ರೆಸ್​​ ಸರ್ಕಾರ ರೈತರ ಜೀವನಕ್ಕೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದೆ ಎಂದು ಬೆಂಗಳೂರಿನಲ್ಲಿ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ಗುಡುಗಿದ್ದಾರೆ.

 ಇದನ್ನೂ ಓದಿ : ಆ ಸ್ಟಾರ್‌ ನಟನ ಜೊತೆ ಹೊಂಬಾಳೆ ಟೈ ಅಪ್‌.. ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಣೆ..!

Leave a Comment

DG Ad

RELATED LATEST NEWS

Top Headlines

ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್​​ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ

Live Cricket

Add Your Heading Text Here