ಬೆಂಗಳೂರು : ವಕ್ಫ್ ಆಸ್ತಿ ಕುರಿತಂತೆ ಪಕ್ಷದ ಅತೃಪ್ತ ನಾಯಕರು ಜನಜಾಗೃತಿ ಅಭಿಯಾನ ನಡೆಸುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನೈಜ ವರದಿ ಸಂಗ್ರಹಿಸುವ ಸಂಬಂಧ ಮೂರು ತಂಡಗಳನ್ನು ರಚಿಸಿದ್ದಾರೆ.
ನಿನ್ನೆ ಬೆಳಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನೇತೃತ್ವದಲ್ಲಿ ಅತೃಪ್ತ ನಾಯಕರು ಸಭೆ ಸೇರಿ ಈ ತಿಂಗಳ 25ರಿಂದ ಒಂದು ತಿಂಗಳ ಕಾಲ ವಕ್ಫ್ ಆಸ್ತಿ ಕುರಿತು ಜನಜಾಗೃತಿ ಅಭಿಯಾನ ನಡೆಸುವ ತೀರ್ಮಾನ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ವಿಜಯೇಂದ್ರ ಅವರು, ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ತಂಡಗಳನ್ನು ರಚಿಸುವ ನಿರ್ಧಾರ ಪ್ರಕಟಿಸಿದರು. ಬಳಿಕ ಸಂಜೆ ಹೊತ್ತಿಗೆ ತಂಡಗಳನ್ನು ರಚಿಸಿ ಪ್ರಕಟಣೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮೂರು ತಂಡಗಳನು ರಚಿಸಲಾಗಿದೆ.
ಇನ್ನು ಹೋರಾಟ ಯಾರು ಮಾಡಿದರೂ ಬೆಂಬಲ ರೈತರ ಪರ ಹೋರಾಟ ಮಾಡುವುದು ತಪ್ಪಲ್ಲ. ವಕ್ಫ್ ವಿರುದ್ಧ ಯಾರೇ ಹೋರಾಟ ಮಾಡಿದರೂ ನಮ್ಮ ಬೆಂಬಲ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಪ್ರವಾಸ ಕೈಗೊಳ್ಳಲಿರುವ ಜಿಲ್ಲೆಗಳು : ರಾಮನಗರ, ಬೆಂ.ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಧುಗಿರಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ.
ಇದನ್ನೂ ಓದಿ : ಬಿಗ್ಬಾಸ್ ಮನೆಯಲ್ಲಿ ಏಕಾಏಕಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ ಕುಂದಾಪುರ.. ಆಗಿದ್ದೇನು?