ಚಿಕ್ಕೋಡಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣವನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ ಆಗಸ್ಟ್ 3ರಿಂದ ಬೆಂಗಳೂರು TO ಮೈಸೂರಿಗೆ ಪಾದಯಾತ್ರೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ನಡುವೆ ಚಿಕ್ಕೋಡಿಯಲ್ಲಿ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಮುಡಾ ಹೋರಾಟವು ಸಿದ್ದರಾಮಯ್ಯ ಅವರನ್ನು ಇಳಿಸಿ, ಡಿಕೆ ಶಿವಕುಮಾರನ್ನು ಸಿಎಂ ಮಾಡೋಕೆ ವಿಜಯೇಂದ್ರ ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಯತ್ನಾಳ್ ಆರೋಪ ಮಾಡಿದ್ದಾರೆ.
ಯತ್ನಾಳ್, ರಮೇಶ್ ಜಾರಕಿಹೊಳಿ ಜಂಟಿ ಪ್ರೆಸ್ಮೀಟ್ ಮಾಡಿದ್ದಾರೆ. ಸುದ್ದಿಗೋಷ್ಠಿ ಉದ್ದಕ್ಕೂ ವಿಜಯೇಂದ್ರ ಮೇಲೆ ಗುಡುಗಿದ ಯತ್ನಾಳ್ ಅವರು, ಬಿಜೆಪಿಯ ಮುಡಾ ಪಾದಯಾತ್ರೆ ಹಿಂದೆ ಡಿಕೆಶಿ ರಾಜಕಾರಣ ಇದೆ. ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿಕೆಶಿ ಸೂಚನೆಯಂತೆ ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ. ವಾಲ್ಮೀಕಿ ಹಗರಣ ಬಹುದೊಡ್ಡ ಹಗರಣವಾದ್ರೂ ಯಾಕೆ ಪಾದಯಾತ್ರೆ ಮಾಡ್ತಿಲ್ಲ ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಪಾದಯಾತ್ರೆ ವಿಚಾರವಾಗಿ ಮಾತನಾಡಿ, ನಾವು ಮತ್ತು ರಮೇಶ್ ಜಾರಕಿಹೊಳಿ ಕೇಂದ್ರದಿಂದ ಒಪ್ಪಿಗೆ ಪಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ಯತ್ನಾಳ್ ತೊಡೆ ತಟ್ಟಿದ್ದಾರೆ.
ಇನ್ನು ಅಸೆಂಬ್ಲಿಯಲ್ಲೂ ವಿಜಯೇಂದ್ರ ಅಡ್ಜೆಸ್ಟ್ಮೆಂಟ್ ರಾಜಕಾರಣ ಮಾಡಿದ್ರು. ಈಗಾಗಲೇ ಬಿಜೆಪಿಯ ಒಬ್ಬೊಬ್ಬರೇ ವಿಜಯೇಂದ್ರ ವಿರುದ್ಧ ಮಾತಾಡ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಿಕ್ಕೋಡಿಯಲ್ಲಿ ದೊಡ್ಡ ಬಾಂಬ್ ಸಿಡಿಸಿದ್ದಾರೆ.
ಇದನ್ನೂ ಓದಿ : ಇಂದು ಸಿಎಂ, ಡಿಸಿಎಂ ದೆಹಲಿ ಪ್ರವಾಸ – ಈ ವಾರವೇ ಸಚಿವ ಸಂಪುಟಕ್ಕೆ ಆಗಲಿದೆಯಾ ಸರ್ಜರಿ?