ಬೆಂಗಳೂರು : ವಕ್ಪ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರ 150 ಕೋಟಿ ರೂ. ಆಮಿಷವೊಡ್ಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ನಿನ್ನೆ ಪೋಸ್ಟ್ ಹಂಚಿಕೊಂಡಿದ್ದರು. ಇದೀಗ ಈ ಬಗ್ಗೆ ಬಿ.ವೈ.ವಿಜಯೇಂದ್ರ ತಿರುಗೇಟು ಕೊಟ್ಟಿದ್ದಾರೆ. ವಕ್ಫ್ ಆಸ್ತಿ ಕಬಳಿಸಿರೋದು ನಾನಲ್ಲ, ಕಾಂಗ್ರೆಸ್ ನಾಯಕರೇ ವಕ್ಫ್ ಆಸ್ತಿ ಕಬಳಿಸಿದ್ದಾರೆ. ಕಾಂಗ್ರೆಸ್ ನಾಯಕರ ರಕ್ಷಿಸಲು 150 ಕೋಟಿ ಯಾಕೆ ಕೊಡಲಿ, CBI ತನಿಖೆ ಕೇಳುವ ನೈತಿಕತೆ ಸಿದ್ದರಾಮಯ್ಯರಿಗೆ ಎಲ್ಲಿದೆ..? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಮುಡಾ ಕೇಸ್ನಲ್ಲಿ ಅಧಿಕಾರ ದುರ್ಬಳಕೆ ಮಾಡಿ ರಕ್ಷಣೆ ಪಡೆಯುತ್ತಿದ್ದೀರಿ, ನಿಮಗೆ ಧೈರ್ಯವಿದ್ದರೆ CBI ತನಿಖೆ ಎದುರಿಸಿ. ಕೋರ್ಟ್ನಲ್ಲಿ ಹಾಕಿರುವ ರಿಟ್ ಅರ್ಜಿಯನ್ನು ವಾಪಸ್ ಪಡೆಯಿರಿ, ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ ಚಿಟ್ ಪಡೆಯೋ ಸಾಹಸ ಮಾಡ್ತಿದ್ದೀರಿ. ಮಾಣಪ್ಪಾಡಿ ವರದಿಯಲ್ಲಿರೋದು ಕಾಂಗ್ರೆಸ್ಸಿಗರು ಆಕ್ರಮಿಸಿರುವ ವಕ್ಫ್ ಆಸ್ತಿ ಎಂದು ವಿಜಯೇಂದ್ರ ಕಿಡಿ ಕಾರಿದ್ದಾರೆ.
ಬಿಜೆಪಿಯವರನ್ನು ಕುರಿತು ವರದಿಯಲ್ಲಿ ಯಾವುದೇ ಉಲ್ಲೇಖ ಇಲ್ಲ, ನಿಮ್ಮ ಸರ್ಕಾರದ ಅಧ್ವಾನ ಮುಚ್ಚಿ ಹಾಕಲು ಇಂಥಾ ಆರೋಪ ಬೇಡ ಎಂದು ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ನಲ್ಲಿ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ : ನಿಶ್ಚಿತಾರ್ಥ ಮಾಡಿಕೊಂಡ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು – ಮದುವೆ ಯಾವಾಗ?