ಚಿತ್ರದುರ್ಗ : ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ.ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಬಿ.ವೈ. ರಾಘವೇಂದ್ರ ಅವರು ಭೋವಿ ಮಠಕ್ಕೆ ಭೇಟಿ ನೀಡಿದ್ದರು.
ಮಠದಲ್ಲಿ ವಿವಿಧ ಮಠಾಧೀಶರನ್ನು ಭೇಟಿಯಾಗಿದ್ದರು. ಹಾಗೂ ಚಿತ್ರದುರ್ಗ ಭೋವಿಮಠದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ರಾಜಕೀಯ ಭಾಷಣ ಮಾಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಪೂರ್ವಾನುಮತಿ ಪಡೆದುಕೊಳ್ಳದೆ ಸಭೆ ನಡೆಸಿ ಭಾಷಣ ಮಾಡಲಾಗಿದೆ ಎಂದು ಚಿತ್ರದುರ್ಗ ಎಫ್.ಎಸ್.ಟಿ. ತಂಡದ ಅವಿನಾಶ್ ಎಂಬುವರು ದೂರು ನೀಡಿದ್ದಾರೆ. ಇದೀಗ ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ : 25 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್..!
Post Views: 183