ಬೆಂಗಳೂರು : ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ನೀಡಿದೆ. ನಗರದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಹತ್ತಿರ ಇರುವ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ ಆಂಡ್ ರೆಸ್ಟೋರೆಂಟ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೊಟೀಸ್ ನೀಡಿದೆ.
ಒನ್ 8 ಕಮ್ಯೂನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಸುರಕ್ಷತೆ ಅಳವಡಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣ ಪತ್ರ ಪಡೆಯದೇ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ನೊಟೀಸ್ನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಎಂಬುವರು ಈ ಬಗ್ಗೆ ಪಾಲಿಕೆಗೆ ದೂರು ನೀಡಿದ್ದರು. ದೂರು ಆಧರಿಸಿ ಶಾಂತಿನಗರ ಪಾಲಿಕೆ ಅಧಿಕಾರಿಗಳು ನೊಟೀಸ್ ನೀಡಿದ್ದಾರೆ. ಈ ಹಿಂದೆ ಕೂಡ ವಿರಾಟ್ ಕೊಹ್ಲಿಯವರಿಗೆ ನೊಟೀಸ್ ಜಾರಿ ಮಾಡಲಾಗಿತ್ತು. ಆಗ ಉತ್ತರಿಸದೇ ನಿರ್ಲಕ್ಷ್ಯ ವಹಿಸಿದ್ದರು. ಇದೀಗ ಏಳು ದಿನದೊಳಗೆ ಸಮಜಾಯಿಸಿ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ :ಮಂಡ್ಯದಲ್ಲಿ ಲಾರಿ ಡ್ರೈವರ್ ಯಡವಟ್ಟಿನಿಂದ ಅಪಘಾತ – ನಾಲ್ವರ ಸ್ಥಿತಿ ಗಂಭೀರ..!
Post Views: 430