Download Our App

Follow us

Home » ಕ್ರೀಡೆ » ಟಿ20 ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ, ರೋಹಿತ್ ಶರ್ಮಾ ವಿದಾಯ..!

ಟಿ20 ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ, ರೋಹಿತ್ ಶರ್ಮಾ ವಿದಾಯ..!

ಬರೋಬ್ಬರಿ 17 ವರ್ಷದ ಬಳಿಕ ಭಾರತ ತಂಡವು ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆದರೆ ಇಬ್ಬರು ಸಹ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ.

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.

ಇನ್ನು ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ರೋಹಿತ್ ಶರ್ಮಾ ಮಾತನಾಡಿ, ಇದು ನನ್ನ ಕೊನೆಯ ಟಿ20ಐ ಪಂದ್ಯವಾಗಿದೆ. ಇದೇ ನನ್ನ ಕೊನೆಯ ಆಟವಾಗಿದೆ. ನಾನು ಟಿ20ಐ ಕ್ರಿಕೆಟ್​ ಆಡಲು ಪ್ರಾರಂಭಿಸಿದ ದಿನದಿಂದಲೂ ಈ ಸ್ವರೂಪವನ್ನು ಆನಂದಿಸುತ್ತಿದ್ದೇನೆ. ಈ ಸ್ವರೂಪಕ್ಕೆ ವಿದಾಯ ಹೇಳಲು ಉತ್ತಮ ಸಮಯ. ನಾನು ಇದರ ಪ್ರತಿ ಕ್ಷಣವನ್ನು ಪ್ರೀತಿಸುತ್ತೇನೆ. ನಾನು ಬಯಸಿದ್ದು ಇದನ್ನೇ. ಈಗ ಕಪ್ ಗೆದ್ದಿದ್ದೇವೆ ಎಂದು ಹೇಳಿದ್ದಾರೆ.

ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 3056 ಎಸೆತಗಳನ್ನು ಎದುರಿಸಿ 4188 ರನ್​ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.

ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 159 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 151 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 3003 ಎಸೆತಗಳನ್ನು ಎದುರಿಸಿದ್ದ ಹಿಟ್​ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಹಾಗೆಯೇ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದೀಗ ವಿಶ್ವಕಪ್​ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ಜೊತೆಯಾಗಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ.

ಇದನ್ನೂ ಓದಿ : ಭಾರತಾಂಬೆಯ ಮಡಿಲು ಸೇರಿದ T-20 ವಿಶ್ವಕಪ್ : 17 ವರ್ಷದ ಬಳಿಕ ಮತ್ತೆ ಗೆದ್ದು ಬೀಗಿದ ಟೀಂ ಇಂಡಿಯಾ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here