Download Our App

Follow us

Home » ರಾಜ್ಯ » ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್ ಪಡೆಯಲು ಸೂಚಿಸಿದ ರಾಜ್ಯ ಸರ್ಕಾರ..!

ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್ ಪಡೆಯಲು ಸೂಚಿಸಿದ ರಾಜ್ಯ ಸರ್ಕಾರ..!

ಕರ್ನಾಟಕದಲ್ಲಿ ಭುಗಿಲೆದ್ದಿದ್ದ ವಕ್ಫ್​ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರೈತರಿಗೆ ನೀಡಿದ್ದ ಎಲ್ಲಾ ವಕ್ಫ್​​ ಬೋರ್ಡ್ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ.

ವಕ್ಫ್ ಸಂಬಂಧ ರೈತರಿಗೆ ನೀಡಿರುವ ಎಲ್ಲಾ ನೋಟಿಸುಗಳನ್ನು ಹಿಂಪಡೆಯಬೇಕು. ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರ ವಿರುದ್ಧ ಯಾವುದೇ ಕ್ರಮವನ್ನು ಜರುಗಿಸಬಾರದು ಅಂತ ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.

ಕೆಲ ರೈತರ ಹಾಗೂ ಇತರ ಆಸ್ತಿಗಳನ್ನು ವಕ್ಸ್ ಹೆಸರಿಗೆ ಖಾತೆ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆ ಈ ಸೂಚನೆ ನೀಡಲಾಗಿದೆ. ಮ್ಯುಟೇಷನ್ ಮಾಡಲು ಯಾವುದೇ ಕಛೇರಿ ಅಥವಾ ಯಾವುದೇ ಪ್ರಾಧಿಕಾರ ನೀಡಿದ ನಿರ್ದೇಶನಗಳನ್ನು ತಕ್ಷಣ ಹಿಂಪಡೆಯಬೇಕು. ಜೊತೆಗೆ ಮ್ಯುಟೇಷನ್ ಪ್ರಕ್ರಿಯೆ ಕೂಡಲೇ ಸ್ಥಗಿತಗೊಳಿಸಬೇಕು. ಮುಖ್ಯಮಂತ್ರಿಗಳ ಆದೇಶವಿದ್ದಾಗಲೂ ಮೇಲಧಿಕಾರಿಗಳ ಅನುಮತಿ ಇಲ್ಲದೆ ಸುತ್ತೋಲೆ ಹೊರಡಿಸಿದ ಅಧಿಕಾರಿ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು? – ದೊಡ್ಮನೆಯಲ್ಲಿ ಹೊಸ ಅವಾರ್ಡ್​..!

Leave a Comment

DG Ad

RELATED LATEST NEWS

Top Headlines

ಜಾರ್ಖಂಡ್​ ವಿಧಾನಸಭೆ ಚುನಾವಣೆ – 43 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ…!

ರಾಂಚಿ : ಜಾರ್ಖಂಡ್ ರಾಜ್ಯದಲ್ಲಿ ಮೊದಲ ಹಂತದ ರಾಜಕೀಯ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು ಜಾರ್ಖಂಡ್​ನಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಎನ್‌ಡಿಎ ಮತ್ತು  ಇಂಡಿಯಾ ಮೈತ್ರಿಕೂಟಗಳ

Live Cricket

Add Your Heading Text Here