Download Our App

Follow us

Home » ರಾಜಕೀಯ » ವಕ್ಫ್​​ ನೋಟಿಸ್​ ಈ ಕೂಡಲೇ ವಾಪಸ್.. ಸಿಎಂ ಸಿದ್ದರಾಮಯ್ಯ ಖಡಕ್ ನಿರ್ಧಾರ..!

ವಕ್ಫ್​​ ನೋಟಿಸ್​ ಈ ಕೂಡಲೇ ವಾಪಸ್.. ಸಿಎಂ ಸಿದ್ದರಾಮಯ್ಯ ಖಡಕ್ ನಿರ್ಧಾರ..!

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ್ದು, ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಸಿಎಂ ಆಗಿದ್ದಾರೆ.

ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು, ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಮುಖ್ಯಮಂತ್ರಿಯವರು ವಿನಂತಿ ಮಾಡಿದ್ದಾರೆ. ಜೊತೆಗೆ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಕೋರಿದ್ದಾರೆ. ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದ್ದಾರೆ.

 ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು :

  • ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.
  • ರೈತರು ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌
  • ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶ಼ಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

ಇದನ್ನೂ ಓದಿ : ಕಣ್ಣೀರು ಒರೆಸುವವನೇ ಜನನಾಯಕ, ಕಣ್ಣೀರು ಸುರಿಸೋನಲ್ಲ – ನಿಖಿಲ್​ ಕಣ್ಣೀರಿಗೆ ಡಿ.ಕೆ ಸುರೇಶ್​ ಲೇವಡಿ..!

 

Leave a Comment

DG Ad

RELATED LATEST NEWS

Top Headlines

ಶೃಂಗೇರಿ ಮಠದ ಜ್ಞಾನೋದಯ ಕಾಲೇಜು​ ಡೆಮಾಲಿಷನ್​​ಗೆ ತಡೆ – ಯಥಾಸ್ಥಿತಿಗೆ BBMP ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರ ಶೃಂಗೇರಿಯ ಶಾರದ ಮಠದ ಅಧೀನದಲ್ಲಿ ನಡೆಯುತ್ತಿರೋ ಜ್ಞಾನೋದಯ ಕಾಲೇಜಿನ ಕಟ್ಟಡಕ್ಕೆ ಡೆಮಾಲಿಷನ್ ಆದೇಶ ನೀಡಿತ್ತು. ಈ ವಿಚಾರ ಹೊರ ಬರುತ್ತಿದ್ದಂತೆ ಸರ್ಕಾರದ

Live Cricket

Add Your Heading Text Here