Download Our App

Follow us

Home » ಕ್ರೀಡೆ » ಆರ್​ಸಿಬಿ ಮಹಿಳಾ ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್​ಗೆ ತವರಲ್ಲಿ ಅದ್ಧೂರಿ ಸ್ವಾಗತ..!

ಆರ್​ಸಿಬಿ ಮಹಿಳಾ ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್​ಗೆ ತವರಲ್ಲಿ ಅದ್ಧೂರಿ ಸ್ವಾಗತ..!

ಕಲಬುರಗಿ : ಭಾರತ ತಂಡದ ಕ್ರಿಕೆಟ್ ಆಟಗಾರ್ತಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ತಮ್ಮ ಸ್ವಂತ ಊರಿಗೆ ಭೇಟಿ ಕೊಟ್ಟಿದ್ದಾರೆ. ಹೌದು, RCB ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್​ ಅವರು ಸ್ವಂತ ಊರು ಜೇವರ್ಗಿ ತಾಲ್ಲೂಕಿನ ಕೋಳಕೂರು ಗ್ರಾಮಕ್ಕೆ ಹೋಗಿದ್ದಾರೆ. ಈ ವೇಳೆ ಹುಟ್ಟೂರಿಗೆ ಬಂದ ಶ್ರೇಯಾಂಕಾ ಪಾಟೀಲ್​ಗೆ ಹೆಮ್ಮೆಯಿಂದ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಶ್ರೇಯಾಂಕಾ ಅವರ ಮೇಲೆ ಹೂ ಮಳೆ ಗೈದ ಗ್ರಾಮಸ್ಥರು ಶ್ರೀ ಸಿದ್ಧಬಸವೇಶ್ವರ ದೇವಸ್ಥಾನದವರೆಗೂ ಅದ್ಧೂರಿಯಾಗಿ ಮೆರವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಬಳಿಕ ಸಿದ್ದಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೇಯಾಂಕಾ ಪಾಟೀಲ್​ಗೆ ಹಾಗೂ ಕುಟುಂಬಸ್ಥರಿಗೆ ಗ್ರಾಮಸ್ಥರು ಸನ್ಮಾನ ಮಾಡಿದ್ದಾರೆ. ಈ ವೇಳೆ ಮತ್ತಷ್ಟು ಉನ್ನತ ಮಟ್ಟಕ್ಕೆ ಶ್ರೇಯಾಂಕಾ ಪಾಟೀಲ್ ಬೆಳೆಯಲೆಂದು ಹಾರೈಸಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಭಾಗಿಯಾಗಿದ್ರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೇಯಾಂಕಾ ಪಾಟೀಲ್ ನನಗೆ ಚಿಕ್ಕಂದಿನಿಂದಲೂ ಸಾಧನೆ ಮಾಡ್ಬೇಕು, ನಮ್ಮೂರಿಗೆ ಕೀರ್ತಿ ತರಬೇಕು ಅನ್ನೋ ಆಸೆ ಇತ್ತು. ಆ ಕನಸು ನಿಮ್ಮೆಲ್ಲರ ಆಶೀರ್ವಾದಿಂದ ನೆರವೇರಿದೆ ಎಂದ್ರು. ಕಾಲೇಜು ವಿದ್ಯಾರ್ಥಿಗಳಿಗೆ ಸ್ಪೂರ್ತಿಧಾಯಕ ಮಾತಗಳನ್ನ ಹೇಳಿದ್ರು.

ಇದನ್ನೂ ಓದಿ : ವಿಜಯಪುರ : ಕೊಳವೆ ಬಾವಿಗೆ ತಲೆಕೆಳಗಾಗಿ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ ಚುರುಕು – ಕ್ಯಾಮೆರಾದಲ್ಲಿ ಕಂದಮ್ಮನ ಚಲನವಲನ ಸೆರೆ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ

Live Cricket

Add Your Heading Text Here