ಬೆಂಗಳೂರು : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಈವರೆಗೆ 333ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ. ಸದ್ಯ ಐದನೇ ದಿನವೂ ಭರದಿಂದ ತೆರವು ಕಾರ್ಯಾಚರಣೆ ಮಾಡಲಾಗ್ತಿದೆ. ಇದರ ನಡುವೆ ದುರಂತದಲ್ಲಿ ಸಿಕ್ಕಿ ನಲುಗಿ ಹೋಗಿರುವ ಜನರಿಗೆ ನೆರವು ನೀಡಲು ಕರ್ನಾಟಕ ಸರ್ಕಾರ ಮುಂದಾಗಿದ್ದು, ವಯನಾಡ್ನಲ್ಲಿ ಕರ್ನಾಟಕ ಸರ್ಕಾರದಿಂದ 100 ಮನೆ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ.
ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : PSI ಪರಶುರಾಮ್ ಸಾವು ಪ್ರಕರಣ – ಕಾಂಗ್ರೆಸ್ MLA ವಿರುದ್ಧ ತನಿಖೆಗೆ ಆಗ್ರಹಿಸಿದ ಬಿಜೆಪಿ ನಾಯಕರು..!