Download Our App

Follow us

Home » ರಾಜಕೀಯ » ವಯನಾಡ್‌ ಭೂಕುಸಿತ : ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ..!

ವಯನಾಡ್‌ ಭೂಕುಸಿತ : ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಕೇರಳದ ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. ಇದೇ ವೇಳೆ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಟ್ವೀಟ್​ ಮಾಡಿ ಕಳವಳ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ನೋವಿನ ಸಂಗತಿ. ಕೇರಳಕ್ಕೆ ಬೇಕಾದ ಅಗತ್ಯ ನೆರವು ಕರ್ನಾಟಕ ಸರ್ಕಾರ ಕೊಡುತ್ತೆ. ಆಹಾರ, ನೀರು, ವೈದ್ಯಕೀಯ ನೆರವಿಗೆ ಸರ್ಕಾರ ಸಿದ್ಧವಾಗಿದೆ. ಕೇರಳ ಸಿಎಂ ಜೊತೆ ನಾನು ಮಾತನಾಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆ. ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಶಕ್ತಿಮೀರಿ ಶ್ರಮಿಸುತ್ತಿದೆ. ಈಗಾಗಲೇ ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವ ಸಂತೋಷ್ ಲಾಡ್​ನ ಕಳುಹಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಪುನೀತ್​ ಕೆರೆಹಳ್ಳಿ ಮೇಲೆ ದೌರ್ಜನ್ಯ ಮಾಡಿದ ACP ವಿರುದ್ಧ ತನಿಖೆ ಆಗ್ಬೇಕು – DCP ಮುಂದೆ 3 ಬೇಡಿಕೆ ಇಟ್ಟ ಪ್ರತಾಪ್​​ ಸಿಂಹ..!

Leave a Comment

DG Ad

RELATED LATEST NEWS

Top Headlines

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸ್ಥಗಿತವಾಗುತ್ತದೆಯೇ ಎಂಬ ಸುದ್ದಿಗಳು ಹರಿದಾಡುತ್ತಿವೆ, ಇದರ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ

Live Cricket

Add Your Heading Text Here