Download Our App

Follow us

Home » ರಾಜಕೀಯ » ಕಾಂಗ್ರೆಸ್ ಸರ್ಕಾರ ಬೀಳಿಸಿ ಅಧಿಕಾರಕ್ಕೆ ಬರುವ ಉದ್ದೇಶ ನಮಗಿಲ್ಲ – ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ..!

ಕಾಂಗ್ರೆಸ್ ಸರ್ಕಾರ ಬೀಳಿಸಿ ಅಧಿಕಾರಕ್ಕೆ ಬರುವ ಉದ್ದೇಶ ನಮಗಿಲ್ಲ – ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ..!

ಹುಬ್ಬಳ್ಳಿ : ರಾಜ್ಯ ಸರ್ಕಾರ ಉರುಳಿಸೋ ಉದ್ದೇಶ ಬಿಜೆಪಿಗಿಲ್ಲ. ಸರ್ಕಾರ ಬೀಳಿಸುವ, ಅಸ್ಥಿರಗೊಳಿಸುವ ಕೆಲಸ ಮಾಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಬಿಜೆಪಿ ವಿರುದ್ದ ಗಂಭೀರ ಆರೋಪ ಮಾಡಿದ್ದರು. ಇದೀಗ ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕಾಂಗ್ರೆಸ್ ಪಕ್ಷಕ್ಕೆ 5 ವರ್ಷ ಜನಾದೇಶ ಸಿಕ್ಕಿದೆ. ರಾಜ್ಯ ಸರ್ಕಾರ ಬೀಳಿಸುವ ಪ್ರಶ್ನೆಯೇ ಉದ್ಭವಿಸದು. ಕಾಂಗ್ರೆಸ್ ಸರ್ಕಾರ ಬೀಳಿಸಿ ಅಧಿಕಾರಕ್ಕೆ ಬರುವ ಉದ್ದೇಶ ನಮಗಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ 5 ವರ್ಷ ಸಂಪೂರ್ಣ ಆಡಳಿತ ನಡೆಸಲಿ. ಬಿಜೆಪಿಯ ನಿಲುವು, ಆಶಯ ಕೂಡಾ ಇದೇ ಆಗಿದೆ. ಕಳೆದ ಬಾರಿ ಕಾಂಗ್ರೆಸ್​ ಪಕ್ಷವನ್ನು ಜನ ತಿರಸ್ಕಾರ ಮಾಡಿದ್ದರು. ಆದಾಗ್ಯೂ ಕಾಂಗ್ರೆಸ್-ಜೆಡಿಎಸ್ ಸೇರಿ ಸರ್ಕಾರ ಮಾಡಿದ್ದವು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಯತ್ನಿಸಿದ್ದರು. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಯತ್ನಿಸಿದರು. ಹೀಗಾಗಿ ಬಿಜೆಪಿ ಸರ್ಕಾರ ರಚಿಸಲು ಪ್ರಯತ್ನಿಸಿತ್ತು. ಆದರೆ ಈ ಬಾರಿ ಬಿಜೆಪಿ ಅಂಥ ಯಾವುದೇ ಪ್ರಯತ್ನ ಮಾಡಿಲ್ಲ ಎಂದಿದ್ದಾರೆ.

ಇನ್ನು ಸಿಎಂ ಮುಡಾ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಸಿಎಂ ಶುದ್ಧಹಸ್ತರು ಎಂದಾದರೆ ಅವರೇ ಸಿಎಂ ಆಗಿ ಮುಂದುವರಿಯಲಿ. ನಮ್ಮ ಅಭ್ಯಂತರ ಏನೂ ಇಲ್ಲ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ : ನಾನು ತಪ್ಪು ಮಾಡಿಲ್ಲ.. ರಾಜೀನಾಮೆ ಕೊಡಲ್ಲ- ಸಿಎಂ ಸಿದ್ದರಾಮಯ್ಯ ವಿಶ್ವಾಸದ ಮಾತು..!

Leave a Comment

DG Ad

RELATED LATEST NEWS

Top Headlines

ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ..!

ದೇಶದ ಮೊದಲ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಗುಜರಾತ್​ನ ಭುಜ್​-ಅಹ್ಮದಾಬಾದ್​ ನಡುವೆ ವಂದೇ ಭಾರತ್​ ಮೆಟ್ರೋ ಸಂಚಾರ ಮಾಡಲಿದೆ. 100-250

Live Cricket

Add Your Heading Text Here