ಬೆಂಗಳೂರು : ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೊಡ್ಡ ಉರುಳಾಗಿ ಪರಿಣಮಿಸಿದ್ದು, ದಿನ ಕಳೆದಂತೆ ಸಿಎಂ ಹಾಗೂ ಕುಟುಂಬಸ್ಥರ ವಿರುದ್ಧ ಒಂದಿಲ್ಲೊಂದು ಆರೋಪ ಕೇಳಿ ಬರುತ್ತಿದೆ. ಇದೀಗ ಪರಿಹಾರ ರೂಪದಲ್ಲಿ ಪಡೆದಿರುವ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದು, ಈ ಬಗ್ಗೆ ಬಿಜೆಪಿ, ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸುದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ‘ರಾಜೀನಾಮೆಯೊಂದೇ ನಿಮಗೆ ಉಳಿದಿರುವ ದಾರಿ’ ‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ. “ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ” ಎಂದಿದ್ರಿ. ಈಗ ಬೇಷರತ್ತಾಗಿ ನಿವೇಶನ ಹಿಂದಿರುಗಿಸುವ ನಿರ್ಧಾರ ಯಾಕೆ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.
ಬಿಜೆಪಿ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದರು, ನಿಮಗೆ ದೊರೆತ 14 ಅಕ್ರಮ ನಿವೇಶನಗಳು 5000 ಸಾವಿರಕ್ಕೂ ಹೆಚ್ಚು ನಿವೇಶನಗಳ ಲೂಟಿಕೋರತನಕ್ಕೆ ರಕ್ಷಣೆಯಾಗಿ ನಿಂತಿದೆ ಎಂದು ಆರೋಪಿಸಿ ನಾವು ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆ ಸಾರಿ-ಸಾರಿ ಹೇಳಿದೆ. ಪರ್ಯಾಯ ಸಮಾವೇಶ ಆಯೋಜಿಸಿ ಭಂಡತನದ ಸಮರ್ಥನೆಗಿಳಿದರು, ಸಾಮಾಜಿಕ ಕಾರ್ಯಕರ್ತರ ನ್ಯಾಯಾಲಯದ ಹೋರಾಟಕ್ಕೆ ಅಸ್ತು ಎಂದ ಘನತೆವೆತ್ತ ರಾಜ್ಯಪಾಲರನ್ನು ಅವಹೇಳನ ಮಾಡಿದರು, ಅವರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಹೋರಾಟ ಮಾಡಿದರು, ನ್ಯಾಯಾಲಯದಲ್ಲಿ ಜಯ ದೊರಕದ ಹಿನ್ನಲೆಯಲ್ಲಿ ಕಾನೂನಿನ ಕುಣಿಕೆ ಬಿಗಿತ ಹೆಚ್ಚಾದಂತೆ, CBI-ED ತನಿಖೆಗಳ ನಿರೀಕ್ಷೆಯಿಂದ ಮುಖ್ಯಮಂತ್ರಿ ಬೆದರಿದ್ದಾರೆ.
ಮುಖ್ಯಮಂತ್ರಿಗಳು ಏಕಾಏಕಿ ಸೈಟ್ ವಾಪಸ್ ನಿರ್ಧಾರಕ್ಕೆ ಬಂದಿದ್ದೀರಿ. ಇದು ಕಾನೂನು ಹೋರಾಟಕ್ಕೆ ಮುನ್ನವೇ ಶಸ್ತ್ರ ತ್ಯಜಿಸಿ ಶರಣಾಗತಿ ಆದಂತೆ.ಸೈಟ್ ವಾಪಸ್ ಕೊಟ್ಟ ಮಾತ್ರಕ್ಕೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೇ?ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬಹುದು ಅಂದ್ಕೊಂಡ್ರಾ?ಇದು ನಿಮ್ಮ ಅಜ್ಞಾನವನ್ನು ಪ್ರತಿಬಿಂಬಿಸುತ್ತದೆ. ನಿವೇಶನಗಳನ್ನು ಹಿಂದಿರುಗಿಸಿದರೆ ತಪ್ಪೊಪ್ಪಿಕೊಂಡಂತೆ. ಇನ್ನು ಸಿಎಂ ಸ್ಥಾನಕ್ಕೂ ರಾಜಿನಾಮೆ ಕೊಟ್ಟು ನೈತಿಕ ಪ್ರದರ್ಶಿಸಿ ಎಂದು ಟ್ವೀಟ್-Xನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ ಮಾಡಿದ್ದಾರೆ.
ಇದನ್ನೂ ಓದಿ : ಮುಡಾ ಕೇಸ್ನಲ್ಲಿ ಸಿಎಂ ಆಯ್ತು, ಸಿಎಂ ಪತ್ನಿ ಆಯ್ತು, ಇದೀಗ ಪುತ್ರ ಯತೀಂದ್ರಗೂ ಸಂಕಷ್ಟ..!