ಹಾವೇರಿ : ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಲತಾ ಎಂಬವವರು ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಯುಗಾದಿ ಹಬ್ಬಕ್ಕೆ ಹೊಸ ಫ್ರಿಜ್ವೊಂದನ್ನು ಖರೀದಿ ಮಾಡಿದ್ದಾರೆ. ಬರೊಬ್ಬರಿ 17,500 ರೂಪಾಯಿ ಕೊಟ್ಟು ಫ್ರಿಜ್ ಖರೀದಿಸಿ ಯುಗಾದಿ ಹಬ್ಬದಂದು ಮನೆಗೆ ತಂದಿದ್ದಾರೆ. ಹಬ್ಬದಂದು ಮನೆಗೆ ಬಂದ ಫ್ರಿಜ್ಗೆ ಲತಾ ಕುಟುಂಬ ಸದಸ್ಯರು ಭರ್ಜರಿ ಪೂಜೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮೀ ಹಣ ಯಾವುದಕ್ಕೆ ಸಾಲೋದಿಲ್ಲ ಎಂಬುವವರಿಗೆ ಲತಾ ಈ ಮೂಲಕ ಉತ್ತರಿಸಿದ್ದಾರೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮಹಿಳೆ ಫ್ರಿಜ್ ಖರೀದಿಸಿದ್ದಾರೆ.
ಇನ್ನು ಕಳೆದ 2023 ಜುಲೈ 19ರಿಂದ ಬಹುನಿರೀಕ್ಷಿತ ಗೃಹ ಲಕ್ಷ್ಮೀ ಯೋಜನೆ ಆರಂಭವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಉದ್ಘಾಟನೆ ಮಾಡುವ ಮೂಲಕ ಚಾಲನೆ ನೀಡಿದ್ದರು. ಫಲಾನುಭವಿಗಳು ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಬಾಬುಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಹಾಕುಲು ಅನುವು ಮಾಡಿಕೊಡಲಾಗಿತ್ತು.
ಇದನ್ನೂ ಓದಿ : ಯುಗಾದಿ ಹಬ್ಬಕ್ಕೆ “ಫುಲ್ ಮೀಲ್ಸ್” ಚಿತ್ರತಂಡದಿಂದ ವಿಶೇಷ ಪೋಸ್ಟರ್ ರಿಲೀಸ್..!