Download Our App

Follow us

Home » ರಾಜ್ಯ » ಬೆಳಗಾವಿ : ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ – ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ..!

ಬೆಳಗಾವಿ : ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ – ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ..!

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ತನಿಖೆ ಮಾಡುತ್ತಿರುವ ಸಿಐಡಿ ಪೊಲೀಸರು ಕೋರ್ಟ್​ಗೆ ಚಾರ್ಜ್​ ಶೀಟ್​ ಸಲ್ಲಿಕೆ ಮಾಡಿದ್ದಾರೆ. 12 ಆರೋಪಿಗಳ ವಿರುದ್ಧ ಬೆಳಗಾವಿಯ 4ನೇ JMFC ಕೋರ್ಟ್​ಗೆ ದೋಷಾರೋಪ ಸಲ್ಲಿಸಲಾಗಿದೆ. ಬೆಳಗಾವಿಯ ಕಾಕತಿ ಪೊಲೀಸ್‌ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ನಂತರ ಸಿಐಡಿಗೆ ಪ್ರಕರಣ ವರ್ಗಾವಣೆಯಾಗಿತ್ತು. ತನಿಖೆ ಪೂರ್ಣಗೊಳಿಸಿ ಸಿಐಡಿ ಚಾರ್ಜ್​​ಶೀಟ್​ ಸಲ್ಲಿಸಿದೆ. ಅಪ್ರಾಪ್ತ ಆರೋಪಿ ವಿರುದ್ಧ ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ಮುಂದಾಗಿದೆ.

ಘಟನೆಯ ವಿವರ : 2023ರ ಡಿಸೆಂಬರ್ 10ರಂದು ಬೆಳಗಾವಿಯ ವಂಟಮೂರಿಯಲ್ಲಿ ಪ್ರೀತಿಸಿದ ಯುವಕನ ಜೊತೆಗೆ ಯುವತಿ ಓಡಿ ಹೋದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವತಿ ಪೋಷಕರು ಯುವಕನ ತಾಯಿ ಮೇಲೆ ದಾಳಿ ಮಾಡಿ ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ರಾಷ್ಟ್ರಮಟ್ಟದಲ್ಲಿ ಈ ಘಟನೆ ಗಮನ ಸೆಳೆದಿದ್ದು, ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಬಿಜೆಪಿ ಸತ್ಯಶೋಧನಾ ಸಮಿತಿ ಬೆಳಗಾವಿಗೆ ಆಗಮಿಸಿ ಸಂತ್ರಸ್ತೆ ಭೇಟಿಯಾಗಿ ಸಾಂತ್ವನ ಹೇಳಿದ್ದರು.

ಈ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಪ್ರಕರಣದ ಕುರಿತು ಸಂತ್ರಸ್ತೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಗ್ರಾಮಸ್ಥರಿಂದ ಮಾಹಿತಿ ಕಲೆಹಾಕಿ ತನಿಖೆ ಪೂರ್ಣಗೊಳಿಸಿದ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಮಟ ಮಟ ಮಧ್ಯಾಹ್ನವೇ ಮನೆಗೆ ನುಗ್ಗಿ 2.250ಗ್ರಾಂ ಚಿನ್ನ ಕದ್ದ ಚಾಲಾಕಿ ಕಳ್ಳ..!

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here