Download Our App

Follow us

Home » ಜಿಲ್ಲೆ » ತುಮಕೂರಿನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದ 7 ಮಹಿಳೆಯರಲ್ಲಿ ಮೂವರು ಸಾ*ವು – ವೈದ್ಯರ ನಿರ್ಲಕ್ಷ್ಯಕ್ಕೆ ಮೃತರ ಕುಟುಂಬಸ್ಥರಿಂದ ಭಾರೀ ಆಕ್ರೋಶ..!

ತುಮಕೂರಿನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದ 7 ಮಹಿಳೆಯರಲ್ಲಿ ಮೂವರು ಸಾ*ವು – ವೈದ್ಯರ ನಿರ್ಲಕ್ಷ್ಯಕ್ಕೆ ಮೃತರ ಕುಟುಂಬಸ್ಥರಿಂದ ಭಾರೀ ಆಕ್ರೋಶ..!

ತುಮಕೂರು : ಗರ್ಭಕೋಶಕ್ಕೆ ಸಂಬಂಧಿಸಿದ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.

ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಫೆ.22ರಂದು 7 ಮಹಿಳೆಯರಿಗೆ ವೈದ್ಯರು ಆಪರೇಷನ್​ ಮಾಡಿದ್ದರು. ಇದೀಗ 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ.

ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಆದರೆ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ. 24 ರಂದು ಮೃತಪಟ್ಟಿದ್ದಾರೆ.

ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ‌ ಸ್ಥಿತಿ ಗಂಭೀರವಾಗಿತ್ತು. ಬಳಿಕ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ. 25ರಂದು ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದಲೇ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಮೃತ ಮಹಿಳೆಯರ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರೊಚ್ಚಿಗೆದ್ದ ಕುಟುಂಬಸ್ಥರು ಪಾವಗಡ ಪಟ್ಟಣದಲ್ಲಿ ಬಳ್ಳಾರಿ ರಸ್ತೆ ತಡೆದು ಘೋಷಣೆ ಕೂಗಿದ್ದಾರೆ. ರಸ್ತೆಯ ಮಧ್ಯೆ ಅಡ್ಡಲಾಗಿ ಮಲಗಿ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮವಾಗಬೇಕು. ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪಾವಗಡ ತಹಶೀಲ್ದಾರ್, ತಾಲೂಕು ವೈದ್ಯಾಧಿಕಾರಿ ಭೇಟಿ ನೀಡಿದ್ದು, ಪ್ರತಿಭಟನೆ ಕೈ ಬಿಡುವಂತೆ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ : ‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾದ ಮೋಷನ್‌ ಪೋಸ್ಟರ್‌ ರಿಲೀಸ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here