ವಿಶ್ವ ಚೆಸ್ ಚಾಂಪಿಯನ್ ಆಗಿ ದೇಶದ ಕೀರ್ತಿ ಪತಾಕೆ ಹಾರಿಸಿದ ಗುಕೇಶ್ ಅವರನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನೆಗೆ ಕರೆದು ಸನ್ಮಾನಿಸಿದ್ದಾರೆ. ಇನ್ನು ಅಮರನ್ ಸಿನಿಮಾದ ನಟ ಶಿವಕಾರ್ತಿಕೆಯನ್ ಕೂಡ ಡಿ.ಗುಕೇಶ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಸನ್ಮಾನ ಮಾಡಿ, ದುಬಾರಿ ವಾಚ್‌ನ್ನು ಉಡುಗೊರೆಯಾಗಿ ನೀಡಿದ್ದಾರೆ.
ಕೇವಲ 18ರ ಪ್ರಾಯದಲ್ಲಿಯೇ ಚೀನಾದ ಡಿಂಗ್ ಲಿರೇನ್ ವಿರುದ್ಧ ಗೆದ್ದು ದಾಖಲೆಯನ್ನು ಬರೆದ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಅತ್ಯಂತ ಕಿರಿಯ ಪ್ಲೇಯರ್ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರವಾದವರು. ಅಷ್ಟೇ ಅಲ್ಲ ಐದು ಬಾರಿ ವಿಶ್ವ ಚಾಂಪಿಯನ್ ಆದ ಆನಂದ್ ಅವರ ನಂತರ ಚೆಸ್ ಚಾಂಪಿಯನ್ ಶಿಪ್ ಗೆದ್ದ ಎರಡನೇ ಭಾರತೀಯ ಕೂಡ ಹೌದು.
ತಲೈವಾ ಗುಕೇಶ್‌ಗೆ ಪುಸ್ತಕವೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ‘ಸೂಪರ್ ಸ್ಟಾರ್ ರಜನಿಕಾಂತ್ ಅವರ ಹಾರೈಕೆಗಳಿಗೆ ಧನ್ಯವಾದಗಳು. ನಮ್ಮನ್ನು ಮನೆಗೆ ಆಹ್ವಾನಿಸಿ, ನಮ್ಮೊಂದಿಗೆ ಅಮೂಲ್ಯವಾದ ಸಮಯ ಕಳೆದು, ಜ್ಞಾನ ಹಂಚಿಕೊಂಡಿದ್ದಕ್ಕೆ ಧನ್ಯವಾದ ಸರ್’ ಎಂದು ಗುಕೇಶ್ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಚಪ್ಪಲಿ ಧರಿಸಲ್ಲ – ಕರ್ನಾಟಕದ ಸಿಂಗಂ ಶಪಥ..!