Download Our App

Follow us

Home » ಕ್ರೀಡೆ » ಇಂದು ಭಾರತ vs ಸೌತ್ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಫೈಟ್ – ಮಳೆಯಿಂದ ಪಂದ್ಯ ರದ್ದಾದರೆ ವಿಶ್ವ ಕಿರೀಟ ಯಾರಿಗೆ? ಇಲ್ಲಿದೆ ಡೀಟೇಲ್ಸ್..!

ಇಂದು ಭಾರತ vs ಸೌತ್ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಫೈಟ್ – ಮಳೆಯಿಂದ ಪಂದ್ಯ ರದ್ದಾದರೆ ವಿಶ್ವ ಕಿರೀಟ ಯಾರಿಗೆ? ಇಲ್ಲಿದೆ ಡೀಟೇಲ್ಸ್..!

ಬಾರ್ಬಡೋಸ್‌ : 2024ರ ಐಸಿಸಿ ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಫೈನಲ್ ಪಂದ್ಯ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಇಂದು(ಜೂನ್ 29) ನಡೆಯಲಿದ್ದು, ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದೆ.

ಒಂದೆಡೆ ಭಾರತ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನವನ್ನು ಸೋಲಿಸಿ ಫೈನಲ್‌ಗೆ ತಲುಪಿದೆ. ಇನ್ನು ಈ ಎರಡೂ ತಂಡಗಳು ವಿಶ್ವಕಪ್‌ನ ಫೈನಲ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ.

ವಿಶೇಷ ಎಂದರೆ ಉಭಯ ತಂಡಗಳು ಈ ಬಾರಿಯ ವಿಶ್ವಕಪ್​ನಲ್ಲಿ ಒಂದೇ ಒಂದು ಸೋಲು ಕಂಡಿಲ್ಲ. ಇದೀಗ ಎರಡೂ ತಂಡಗಳು ಗೆಲುವಿನ ನಾಗಾಲೋಟದೊಂದಿಗೆ ಫೈನಲ್​ಗೆ ಎಂಟ್ರಿ ಕೊಟ್ಟಿದ್ದು, ಅಂತಿಮ ಪಂದ್ಯದಲ್ಲಿ ಯಾರು ಗೆಲುತ್ತಾರೆ, 2024ರ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಕಿರೀಟ ಯಾರ ಮುಡಿಗೇರಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ.

ಫೈನಲ್‌ ಪಂದ್ಯ ಮಳೆಯಿಂದ ರದ್ದಾದರೆ ಮೀಸಲು ದಿನ : ಐಸಿಸಿ ಫೈನಲ್ ಪಂದ್ಯಕ್ಕಾಗಿ ಮೀಸಲು ದಿನವನ್ನು ಸಹ ಇರಿಸಿದೆ. ಇಂದು ಮಳೆಯಿಂದಾಗಿ ಪಂದ್ಯ ರದ್ದಾದರೆ ಜೂನ್ 30 ರಂದು ಫೈನಲ್ ಪಂದ್ಯ ನಡೆಯಲಿದೆ. ಇದಲ್ಲದೇ ಫೈನಲ್ ಪಂದ್ಯಕ್ಕೆ 190 ನಿಮಿಷಗಳ ಹೆಚ್ಚುವರಿ ಸಮಯವನ್ನು ಕೂಡ ಇರಿಸಲಾಗಿದೆ. ಇದರ ಹೊರತಾಗಿಯೂ, ಮೀಸಲು ದಿನದಂದು ಸಹ ಮಳೆಯಿಂದಾಗಿ ಪಂದ್ಯ ರದ್ದಾದರೆ, ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾವನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಇದನ್ನೂ ಓದಿ : ಸಿದ್ದರಾಮಯ್ಯಗೆ ಧರ್ಮಬುದ್ಧಿ ಇದ್ದರೆ ಸಿಎಂ ಹುದ್ದೆ ಬಿಟ್ಟುಕೊಡಲಿ – ಸಿಎಂ ಸಿದ್ದು ವಿರುದ್ಧ ಗುಡುಗಿದ ಚಂದ್ರಶೇಖರನಾಥ ಸ್ವಾಮೀಜಿ..! 

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here