Download Our App

Follow us

Home » ಕ್ರೀಡೆ » ಡಬ್ಲ್ಯೂಪಿಎಲ್ ಫೈನಲ್ 2024 : ಆರ್​ಸಿಬಿ-ಡೆಲ್ಲಿ ಕ್ಯಾಪಿಟಲ್ಸ್ ರಣರೋಚಕ ಕದನ ಯಾವಾಗ? ಎಲ್ಲಿ? ಇಲ್ಲಿದೆ ಮಾಹಿತಿ..!

ಡಬ್ಲ್ಯೂಪಿಎಲ್ ಫೈನಲ್ 2024 : ಆರ್​ಸಿಬಿ-ಡೆಲ್ಲಿ ಕ್ಯಾಪಿಟಲ್ಸ್ ರಣರೋಚಕ ಕದನ ಯಾವಾಗ? ಎಲ್ಲಿ? ಇಲ್ಲಿದೆ ಮಾಹಿತಿ..!

ಡಬ್ಲ್ಯೂಪಿಎಲ್ 2024 ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ ಆಗಲಿದೆ. ಶುಕ್ರವಾರ, ಮಾರ್ಚ್ 15 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 5 ರನ್‌ಗಳಿಂದ ಸೋಲಿಸಿ ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟಿತು.

ಕಳೆದ ಸೀಸ್​ನ್​ನಲ್ಲಿ ಪ್ಲೇಆಫ್‌ಗಳನ್ನು ಕಳೆದುಕೊಂಡಿದ್ದ ಸ್ಮೃತಿ ಮಂಧಾನ ಸಾರಥ್ಯದ ಆರ್​ಸಿಬಿ, ಈ ಸೀಸ್​ನ್​ನಲ್ಲಿ ಉತ್ತಮ ಪ್ರದರ್ಶನ ನೀಡಿ ಅಗ್ರ-3ರಲ್ಲಿ ಸ್ಥಾನ ಗಳಿಸಿ ಫೈನಲ್‌ಗೆ ಪ್ರವೇಶಿಸಿದೆ. ಇದೀಗ ಫೈನಲ್ ಪಂದ್ಯ ಯಾವಾಗ?, ಎಲ್ಲಿ? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಡಬ್ಲ್ಯೂಪಿಎಲ್ 2024 ಫೈನಲ್ ಪಂದ್ಯ ಯಾವಾಗ? ಪಂದ್ಯ ಎಲ್ಲಿ? ಎಲ್ಲಿ ವೀಕ್ಷಿಸಬಹುದು? ಎಷ್ಟು ಗಂಟೆಗೆ ಆರಂಭ? ಮಾರ್ಚ್ 17 ರಂದು ಡೆಲ್ಲಿ ಕ್ಯಾಪಿಟಲ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ಡಬ್ಲ್ಯೂಪಿಎಲ್ 2024 ಫೈನಲ್ ಪಂದ್ಯ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಪಂದ್ಯವನ್ನು ಆಯೋಜಿಸಲಾಗಿದೆ. ಫೈನಲ್ ಪಂದ್ಯದ ಲೈವ್ ಸ್ಟ್ರೀಮ್ JioCinema ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ. ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿಯೂ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಬಹುದು. ಫೈನಲ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 7:30ಕ್ಕೆ ಆರಂಭವಾಗಲಿದೆ.

ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ – ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಎಲಿಸ್ ಕ್ಯಾಪ್ಸೆ, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ, ಶಿಖಾ ಪಾಂಡೆ, ಮಿನ್ನು ಮಣಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಮೊಲಿನೆಕ್ಸ್, ಎಲಿಸ್ ಪೆರ್ರಿ, ಸೋಫಿ ಡಿವೈನ್, ರಿಚಾ ಘೋಷ್ (ವಿಕೆಟ್ ಕೀಪರ್), ಜಾರ್ಜಿಯಾ ವೇರ್ಹ್ಯಾಮ್, ದಿಶಾ ಕಾಸ್ಟ್, ಶ್ರೇಯಾಂಕಾ ಪಾಟೀಲ್, ಆಶಾ ಶೋಭನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಸಿಂಗ್.

ಇದನ್ನೂ ಓದಿ : ಖರ್ಗೆ ತವರಿನಿಂದಲೇ ಲೋಕಸಭೆ ಚುನಾವಣೆಗೆ ನಮೋ‌ ಶಂಕನಾದ – ಇಂದು ಕಲಬುರಗಿಯಲ್ಲಿ ಮೋದಿ ಅಬ್ಬರದ ಪ್ರಚಾರಕ್ಕೆ ಚಾಲನೆ..! 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here